ಕೊಪ್ಪಳದಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಮೃತ ಬಾಲಕಿಯರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ.
Two Girls Drown In Farm Pond in Koppal
ಮೃತ ಬಾಲಕಿಯರು
Updated on

ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಂಗಳವಾರ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ.

ಯರೇಹಂಚಿನಾಳ ಗ್ರಾಮದಿಂದ ಗದಗಕ್ಕೆ ಹೋಗುವ ರಸ್ತೆ ಪಕ್ಕದಲ್ಲಿರುವ 362ನೇ ಸರ್ವೆ ನಂಬರಿನ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Two Girls Drown In Farm Pond in Koppal
ದಾವಣಗೆರೆ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಸಾವು

ಮೃತ ಬಾಲಕಿಯರ ಕುಟುಂಬಗಳು ಬಡವರಾಗಿದ್ದು, ಮಕ್ಕಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಕುಕನೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com