

ಬೆಂಗಳೂರು: ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ, ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.
ರಾಜ್ಯದಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಕಡಿಮೆ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯೆ ನೀಡದೆ ಹೋದರು. ನಂತರ ಯುನ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ನೀಟ್ ಪರೀಕ್ಷೆ ಅಕ್ರಮದ ಹಿನ್ನೆಯಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಬೇಕು, ಬಿಜೆಪಿಯವರು ಭಂಡರು ಎಂದರು.
Advertisement