ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ, 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Boxing coach booked under POCSO Act for harassing trainee in Bengaluru
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪದ ಮೇಲೆ 50 ವರ್ಷದ ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ, 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಮೇ 17 ರಂದು, ತನ್ನ ಮಗಳು ಬಾಕ್ಸಿಂಗ್ ಸ್ಪರ್ಧೆಗಾಗಿ ಚೆನ್ನೈಗೆ ಹೋದಾಗ, ತರಬೇತುದಾರ ಅವಳನ್ನು ತನ್ನ ಖಾಸಗಿ ಕೋಣೆಗೆ ಕರೆದುಕೊಂಡು ಹೋಗಿ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

Boxing coach booked under POCSO Act for harassing trainee in Bengaluru
17 ವರ್ಷದ ಬಾಲಕಿ ಜೊತೆ ರಿಲೇಶನ್ ಶಿಪ್: ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್ ದಾಖಲು

ಆರೋಪಿ, ಈ ವಿಷಯವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಎಫ್‌ಐಆರ್ ಪ್ರಕಾರ, ಹದಿಹರೆಯದ ಬಾಲಕಿ ಸುಮಾರು 10 ವರ್ಷಗಳಿಂದ ತರಬೇತಿ ಪಡೆಯುತ್ತಿದ್ದು, ಸುಮಾರು ನಾಲ್ಕು ವರ್ಷಗಳಿಂದ ತರಬೇತುದಾರ ತನ್ನೊಂದಿಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದರು. ಕಳೆದ ಐದರಿಂದ ಆರು ತಿಂಗಳುಗಳಲ್ಲಿ ಈ ನಡವಳಿಕೆ ಮತ್ತಷ್ಟು ತೀವ್ರಗೊಂಡಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com