ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ, ಹಾಕಿಕೊಂಡು ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆ

ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
Minister Madhu Bangarappa
ಸಚಿವ ಮಧು ಬಂಗಾರಪ್ಪ
Updated on

ಬೆಂಗಳೂರು: ರಾಜ್ಯ ಸರ್ಕಾರದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌ ಎಂದರು.

ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

Minister Madhu Bangarappa
'ಹಿಜಾಬ್ ಹಿಂದಿನಿಂದಲೇ ಇದ್ದ ಪದ್ಧತಿ, ಅದನ್ನು ಬಿಜೆಪಿ ನಿಷೇಧಿಸಿತ್ತು, ನಾವು ತೆಗೆದಿದ್ದೇವೆ ಅಷ್ಟೇ': ಡಾ ಜಿ ಪರಮೇಶ್ವರ್; Video

ರಾಜ್ಯ ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್​ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.

ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com