ಜೂನ್ ತಿಂಗಳಲ್ಲೇ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಜೂನ್ 1ರಂದು ಮುಖ್ಯಮಂತ್ರಿಗಳು ಶಿವಮೊಗ್ಗದಲ್ಲಿ ಶಾಲಾ ಆರಂಭಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ್ದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
Madhu Bangarappa
ಮಧು ಬಂಗಾರಪ್ಪ
Updated on

ಶಿವಮೊಗ್ಗ: ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತಿದೆ. ಒಟ್ಟು 52 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಜೂನ್ 1ರಂದು ಮುಖ್ಯಮಂತ್ರಿಗಳು ಶಿವಮೊಗ್ಗದಲ್ಲಿ ಶಾಲಾ ಆರಂಭಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ್ದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಶಿವಮೊಗ್ಗದಲ್ಲಿ 19 ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಠ 3.5 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ.

Madhu Bangarappa
ಶಿಕ್ಷಣ ಕ್ಷೇತ್ರಕ್ಕೆ ಬಲ: 10,419 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!

ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹಳಷ್ಟು ನ್ಯೂನತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇ ಅದಕ್ಕೆ ಸಾಕ್ಷಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com