ಭಟ್ಕಳ ದುರಂತ: ಕಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ; ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಘೋಷಣೆ!

14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು.
Bhatkal Tragedy
ಭಟ್ಕಳ ದುರಂತ
Updated on

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಸಂಭವಿಸಿದ ದುರಂದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು.

ನೀರು ಪಾಲಾದವರು ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.

ಮೃತರನ್ನು ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಹಾಗೂ ಲಕ್ಷ್ಮೀ ಅಣ್ಣಪ್ಪ ನಾಯ್ಕ(44) ಎಂದು ಗುರುತಿಸಲಾಗಿದೆ.

Bhatkal Tragedy
ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ.

ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com