ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ, ಗರ್ಭಿಣಿಯಾದ ಬಾಲಕಿ; ಆರೋಪಿ ಬಂಧನ

ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.
representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ನಿವೃತ್ತಿಯ ಅಂಚಿನಲ್ಲಿರುವ 59 ವರ್ಷದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಶುಕ್ರವಾರ ಬಂಧಿಸಲಾಗಿದೆ.

ಶನಿವಾರ ಮುಖ್ಯೋಪಾಧ್ಯಾಯ ಚಂದ್ರಯ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿದ್ಯಾರ್ಥಿನಿ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು, ಆಕೆ ಮುಖ್ಯೋಪಾಧ್ಯಾಯರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆಂದು ತಿಳಿದು ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

'ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವೈದ್ಯಕೀಯ-ಕಾನೂನು ಕ್ರಮಗಳು ನಡೆಯುತ್ತಿವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

representational image
ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು

ಬೆಂಗಳೂರು ಉತ್ತರ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಬಾಲಕಿಗೆ ತಾತ್ಕಾಲಿಕ ವಸತಿ ಒದಗಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉತ್ತರ (ಯಲಹಂಕ) ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com