ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧ ಇಲ್ಲ: ಸಚಿವ ಗೃಹ ಸಚಿವ ಪರಮೇಶ್ವರ್

ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ನಿಯಮಿತ ಪ್ರಕ್ರಿಯೆ.
Dr G Parameshwar
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಗೃಹ ಸಚಿವ ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರ್‌ರಚನೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಈ ಎರಡೂ ಪ್ರಕ್ರಿಯೆಗಳು ಪ್ರತ್ಯೇಕವಾಗಿ ನಡೆಯಲಿವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, “ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ನಿಯಮಿತ ಪ್ರಕ್ರಿಯೆ. ಸಚಿವ ಸಂಪುಟ ಪುನರಾಚನೆ ನಿರ್ಧಾರಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಜೂನ್ 18ರಂದು ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರ ಮೊದಲು ಸಚಿವ ಸಂಪುಟ ಪುನರಾಚನೆ ಅಥವಾ ನಾಯಕತ್ವ ಬದಲಾವಣೆ ಕುರಿತು ತೀರ್ಮಾನವಾಗುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಅನಗತ್ಯ ಊಹಾಪೋಹ ಬೇಡ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.

Dr G Parameshwar
ನಾಯಕತ್ವ ಬದಲಾವಣೆ ಅನಿಶ್ಚಿತತೆ: ಮೇ ಅಂತ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ

ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಒತ್ತಾಯಿಸುತ್ತಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಮೂರು, ನಾಲ್ಕು ಬಾರಿ ಗೆದ್ದಿರುವ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಅವರಿಗೆ ಸಾಮರ್ಥ್ಯವೂ ಇದೆ. ಆದರೆ, ಸಚಿವ ಸಂಪುಟದಲ್ಲಿ ಸೇರಿಸಬಹುದಾದ ಸಚಿವರ ಸಂಖ್ಯೆಗೆ 15 ಶೇಕಡಾ ಮಿತಿ ಇದೆ. ಹೀಗಾಗಿ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಮ್ಮ ಖಾತೆ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ನಾನು ಎಂಟು ವರ್ಷಗಳಿಂದ ಗೃಹ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ನನಗೆ ಯಾವುದೇ ಬೇಸರ ಇಲ್ಲ, ನಿರಾಸೆಯೂ ಇಲ್ಲ. ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ. ಇನ್ನೂ ದೊಡ್ಡ ಜವಾಬ್ದಾರಿಯನ್ನೂ ಹೊರುವ ಸಾಮರ್ಥ್ಯ ನನ್ನಲ್ಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com