ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ದೆಹಲಿಗೆ ತಲುಪಿದ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ.ವೇಣುಗೋಪಾಲ್ ಹಾಗೂ ರಂದೀಪ್ ಸುರ್ಜೇವಾಲಾ ಅವರನ್ನು ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
Siddaramaiah meets party general secretaries KC Venugopal and Randeep Surjewala at party headquarters, Indira Bhavan
ದೆಹಲಿಯಲ್ಲಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮಂಗಳವಾರ ಬೆಳಿಗ್ಗೆ ನವದೆಹಲಿಗೆ ತೆರಳಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ದೆಹಲಿಗೆ ತಲುಪಿದ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ.ವೇಣುಗೋಪಾಲ್ ಹಾಗೂ ರಂದೀಪ್ ಸುರ್ಜೇವಾಲಾ ಅವರನ್ನು ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇದಕ್ಕೂ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಸಚಿವರು ಹಾಗೂ ಶಾಸಕರೊಂದಿಗೆ ಉಪಾಹಾರ ಸಭೆ ನಡೆಸಿದರು.

ಸಚಿವರಾದ ಎಂ.ಬಿ. ಪಾಟೀಲ್, ಜಿ. ಪರಮೇಶ್ವರ, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಎಚ್.ಸಿ. ಮಹದೇವಪ್ಪ, ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಹಾಗೂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ 17ಕ್ಕೂ ಹೆಚ್ಚು ಶಾಸಕರು ಈಗಾಗಲೇ ಕರ್ನಾಟಕ ಭವನಕ್ಕೆ ಆಗಮಿಸಿದ್ದು, ಇನ್ನೂ ಹಲವು ಶಾಸಕರು ದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೇರಿದಂತೆ ಹಲವು ಹಿರಿಯ ನಾಯಕರು ಇಂದಿರಾ ಭವನಕ್ಕೆ ಆಗಮಿಸಿದ್ದು, ಸಭೆಗೆ ಭಾರೀ ಮಹತ್ವ ಸಿಕ್ಕಿದೆ.

Siddaramaiah meets party general secretaries KC Venugopal and Randeep Surjewala at party headquarters, Indira Bhavan
CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಮೊದಲು ಕರ್ನಾಟಕ ಭವನಕ್ಕೆ ಹೋಗುತ್ತಿದ್ದೇನೆ. ಬಳಿಕ ಸಭೆಯಲ್ಲಿ ಭಾಗವಹಿಸುತ್ತೇನೆ” ಎಂದು ಹೇಳಿದರು.

ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಈ ನಡುವೆ ಸಭೆಯ ಕಾರ್ಯಸೂಚಿ ಕುರಿತು ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು, “ಸಭೆಯ ಅಜೆಂಡಾ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ರಾಜ್ಯಸಭಾ ಚುನಾವಣೆ, ಎಂಎಲ್‌ಸಿ ಚುನಾವಣೆ, ಸಚಿವ ಸಂಪುಟ ಪುನರಾಚನೆ ಸೇರಿದಂತೆ ಹಲವು ವಿಷಯಗಳು ಚರ್ಚೆಯಾಗಬಹುದು. ಏನಾಗಲಿದೆ ಎಂಬುದು ರಾಹುಲ್ ಗಾಂಧಿಗೆ ಮಾತ್ರ ಗೊತ್ತು ಎಂದು ಹೇಳಿದರು.

ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತ ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ ಎಂದು ಹೇಳಿದ್ದಾರೆ.

ನಾನು ಸಿದ್ದರಾಮಯ್ಯ ಅವರ ಶಿಷ್ಯ. ಈಗ ಅವರು ಮುಖ್ಯಮಂತ್ರಿಯಾಗಿದ್ದಾರೆ. ಬದಲಾವಣೆ ಆಗುತ್ತದೆಯೋ ಇಲ್ಲವೋ ಎಂಬುದನ್ನು ಭವಿಷ್ಯದಲ್ಲೇ ನೋಡಬೇಕು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಕುರಿತ ಸ್ಪಷ್ಟತೆ ಮುಂದಿನ ಎರಡು-ಮೂರು ದಿನಗಳಲ್ಲಿ ಸಿಗುವ ಸಾಧ್ಯತೆ ಇದ್ದು, ರಾಜ್ಯಸಭಾ ಚುನಾವಣೆ, ಎಂಎಲ್‌ಸಿ ಚುನಾವಣೆ ಮತ್ತು ಸಚಿವ ಸಂಪುಟ ಪುನರಾಚನೆ ಕುರಿತ ಅಂತಿಮ ನಿರ್ಧಾರಗಳೂ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com