ರಾಜೀನಾಮೆಗೂ ಮುನ್ನ ಎಲ್ಲಾ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಸಿಎಂ ಬಯಸಿದ್ದಾರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬ್ರೇಕ್‌ಫಾಸ್ಟ್ ಮೀಟಿಂಗ್'ಗೆ ತೆರಳವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಮುಖ್ಯಮಂತ್ರಿ ಎಲ್ಲಾ ಸಚಿವರನ್ನೂ ಬ್ರೇಕ್‌ಫಾಸ್ಟ್‌ ಮೀಟಿಂಗ್'ಗೆ ಕರೆದಿದ್ದಾರೆ. ರಾಜೀನಾಮೆ ನೀಡುವ ಮುನ್ನ ಎಲ್ಲ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಅವರು ಬಯಸಿದ್ದಾರೆ.
Parameshwar
ಗೃಹ ಸಚಿವ ಡಾ.ಜಿ.ಪರಮೇಶ್ವರ್
Updated on

ಬೆಂಗಳೂರು: ರಾಜೀನಾಮೆಗೂ ಮುನ್ನ ಎಲ್ಲಾ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆದಿದ್ದಾರೆದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಬ್ರೇಕ್‌ಫಾಸ್ಟ್ ಮೀಟಿಂಗ್'ಗೆ ತೆರಳವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಮುಖ್ಯಮಂತ್ರಿ ಎಲ್ಲಾ ಸಚಿವರನ್ನೂ ಬ್ರೇಕ್‌ಫಾಸ್ಟ್‌ ಮೀಟಿಂಗ್'ಗೆ ಕರೆದಿದ್ದಾರೆ. ರಾಜೀನಾಮೆ ನೀಡುವ ಮುನ್ನ ಎಲ್ಲ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಅವರು ಬಯಸಿದ್ದಾರೆಂದು ಹೇಳಿದ್ದಾರೆ.

ಮುಂದುವರೆದು, ಸಿದ್ದರಾಮಯ್ಯ ಅವರಿಗೆ ದೆಹಲಿಯಲ್ಲಿ ಯಾವುದೇ ಹುದ್ದೆ ಅಥವಾ ಆಫರ್ ನೀಡಲಾಗಿದೆಯೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಸಂಪೂರ್ಣವಾಗಿ ಹೈಕಮಾಂಡ್‌ನ ನಿರ್ಧಾರಕ್ಕೆ ಸೇರಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಮೂರು ವರ್ಷಗಳಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ.

ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Parameshwar
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com