Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ.
Siddaramaiah's Farewell Speech
ಸಿದ್ದರಾಮಯ್ಯ ಸುದ್ದಿಗೋಷ್ಠಿANI
Updated on

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು. ಆದರೆ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ರಾಜೀನಾಮೆ ಪತ್ರವನ್ನು ಅವರ ಕಚೇರಿಯ ಕಾರ್ಯದರ್ಶಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ರಾಜೀನಾಮೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಯಾವಾಗಲೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದು, ನಾಯಕರು ಸೂಚಿಸಿದಂತೆ ಗುರುವಾರವೇ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದರು.

'ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ಹೀಗಾಗಿ ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಇಂದು ನನ್ನ ರಾಜಿನಾಮೆ ನೀಡಿದ್ದೇನೆ.

ರಾಜ್ಯಪಾಲರು ನನ್ನ ರಾಜಿನಾಮೆ ಪತ್ರವನ್ನು ಅವರು ಆಗಮಿಸಿದ ಬಳಿಕ ಅಂಗೀಕಾರ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಅಲ್ಲದೆ ಸಂವಿಧಾನದ ಪ್ರಕಾರ ಮಾಡಲೇಬೇಕು ಕೂಡ. ಒಂದು ಸಾರಿ ಮುಖ್ಯಮಂತ್ರಿಗಳು ರಾಜಿನಾಮೆ ಕೊಟ್ಟ ಮೇಲೆ ಅಂಗೀಕಾರ ಮಾಡಿ, ಮುಂದಿನ ಮುಖ್ಯಮಂತ್ರಿಗಳಿಗೆ ಅವಕಾಶ ಮಾಡಿಕೊಡುವುದು ಅವರ ಕರ್ತವ್ಯ ಎಂದರು.

Siddaramaiah's Farewell Speech
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಸಂಪೂರ್ಣ ಬಹುಮತವಿದೆ

ಇದೇ ವೇಳೆ ನಮ್ಮ ಪಕ್ಷ 135 ಮತ್ತು 1 ಸ್ಥಾನಗಳನ್ನು ನಾವು ಪಡೆದಿದ್ದೇವೆ. ಜೊತೆಯಲ್ಲಿ ಇಬ್ಬರು ಸ್ವತಂತ್ರ್ಯ ಅಭ್ಯರ್ಥಿಗಳೂ ಕೂಡ ಬೆಂಬಲ ಘೋಷಿಸಿದ್ದಾರೆ. ಹೀಗಾಗಿ ನಾವು ಸಂಪೂರ್ಣ ಬಹುಮತದಲ್ಲಿದ್ದೇವೆ. ಹೀಗಾಗಿ ಮುಂದಿನ ಮುಖ್ಯಮಂತ್ರಿಗೆ ಅವಕಾಶ ನೀಡಬೇಕು. ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಡಾ.ರಾಜ್ ಕುಮಾರ್ ಸ್ಮರಣೆ

ಇದೇ ವೇಳೆ ದಿವಂಗತ ನಟ ಡಾ.ರಾಜ್ ಕುಮಾರ್ ಅವರನ್ನು ನೆನೆಸಿಕೊಂಡ ಸಿದ್ದರಾಮಯ್ಯ, ರಾಜ್ ಕುಮಾರ್ ಅವರು ಅಭಿಮಾನಿಗಳನ್ನೇ ದೇವರು ಎಂದು ಕರದೆರು. ನಾನು ರಾಜಕಾರಣಿ ನಮಗೆ ಮತದಾರರೇ ನಮ್ಮ ಅಭಿಮಾನಿ ದೇವರುಗಳು.

ಕನ್ನಡನಾಡಿನ 7 ಕೋಟಿ ಜನರ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. 2 ಬಾರಿ ಮುಖ್ಯಮಂತ್ರಿಯಾಗಿದ್ದೆ, 2 ಬಾರಿ ವಿರೋಧ ಪಕ್ಷದ ನಾಯಕನಾಗಿದ್ದೆ. ನನಗೆ ಈ ಅವಕಾಶ ಕೊಟ್ಟ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಅಪಾರ ಧನ್ಯವಾದ ತಿಳಿಸುತ್ತೇನೆ.

ನಾನು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಸಕರಿಗೆ ಮತ್ತು ಸಂಸದರಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ. 2013ರಿಂದ 2018ರವೆರಗೆ, 2023ರಿಂದ ಇಲ್ಲಿಯವರೆಗೂ ಸಿಎಂ ಆಗಿದ್ದೇ. ಈ ಸಂದರ್ಭದಲ್ಲಿ ನನ್ ಜೊತೆ ಕೆಲಸ ಮಾಡಿದ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಹಳ್ಳಿಗಾಡಿನಿಂದ ಪಂದವನು, ನಮ್ಮ ಕುಟುಂಬದವರು ಯಾರು ರಾಜಕೀಯದಲ್ಲಿರಲಿಲ್ಲ. ಆದಾಗ್ಯೂ ರಾಜಕೀಯದಲ್ಲಿ ಹಲವು ಉನ್ನತ ಮಟ್ಟಕ್ಕೇರಿದ್ದೆ ಎಂದರು.

ರಾಜ್ಯಪಾಲರು ರಾಜಿನಾಮೆ ಸ್ವೀಕರಿಸುವ ವಿಶ್ವಾಸವಿದೆ

ಅಂತೆಯೇ ರಾಜ್ಯಪಾಲರು ರಾತ್ರಿ ಮರಳಿದ ಬಳಿಕ ಸಂವಿಧಾನದ ನಿಯಮಾವಳಿಗಳ ಪ್ರಕಾರ ನನ್ನ ರಾಜೀನಾಮೆಯನ್ನು ಅಂಗೀಕರಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಮತ್ತು ಅದು ಅವರ ಜವಾಬ್ದಾರಿಯಾಗಿದೆ. ನಮ್ಮ ಪಕ್ಷವು 135+1 ಸ್ಥಾನಗಳನ್ನು ಹೊಂದಿದ್ದು, ಇಬ್ಬರು ಪಕ್ಷೇತರರ ಬೆಂಬಲವೂ ಇದೆ. ಸರ್ಕಾರಕ್ಕೆ ಸಂಪೂರ್ಣ ಬಹುಮತವಿರುವುದರಿಂದ ಮುಂದಿನ ಮುಖ್ಯಮಂತ್ರಿಗೆ ಅವಕಾಶ ಮಾಡಿಕೊಡುವುದು ಸಂವಿಧಾನಬದ್ಧವಾಗಿದೆ ಎಂದರು.

ರಾಜ್ಯದ ಪ್ರಸ್ತುತ ರಾಜಕೀಯ ಬಲದ ಬಗ್ಗೆ ಮಾತನಾಡಿದ ಅವರು, “ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡಿ ಮುಂದಿನ ಮುಖ್ಯಮಂತ್ರಿಗೆ ಆಡಳಿತ ನಡೆಸಲು ಅನುವು ಮಾಡಿಕೊಡುವುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ನಮ್ಮ ಪಕ್ಷ 135-1 ಸ್ಥಾನಗಳನ್ನು ಪಡೆದುಕೊಂಡಿದೆ. ಇದರ ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಕೂಡ ನಮ್ಮ ಜೊತೆಯಲ್ಲಿದ್ದಾರೆ. ನಾವು ರಾಜ್ಯದಲ್ಲಿ ಸಂಪೂರ್ಣ ಬಹುಮತದಲ್ಲಿದ್ದೇವೆ. ಆದ್ದರಿಂದ ಯಾವುದೇ ಗೊಂದಲವಿಲ್ಲದೆ ಮುಂದಿನ ಮುಖ್ಯಮಂತ್ರಿಗೆ ಅವಕಾಶ ನೀಡಬೇಕು” ಎಂದು ಕೋರಿದರು.

ಸಂವಿಧಾನವೇ ಧರ್ಮ: ಭಾವುಕರಾದ ಸಿದ್ದರಾಮಯ್ಯ

ಮೇರು ನಟ ಡಾ. ರಾಜ್‌ಕುಮಾರ್ ಅವರ 'ಅಭಿಮಾನಿ ದೇವರು' ಎಂಬ ಮಾತನ್ನು ಸ್ಮರಿಸಿದ ಅವರು, "ನನಗೆ ಸಂವಿಧಾನವೇ ಧರ್ಮ, ಮತದಾರರೇ ನನ್ನ ಅಭಿಮಾನಿ ದೇವರು" ಎಂದು ಭಾವುಕರಾಗಿ ನುಡಿದರು. ಕನ್ನಡ ನಾಡಿನ ಏಳು ಕೋಟಿ ಜನರಿಗೆ ಸೇವೆ ಸಲ್ಲಿಸಲು ಸಿಕ್ಕ ಅವಕಾಶಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿದರು.

Siddaramaiah's Farewell Speech
ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ತಮ್ಮ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸುತ್ತಾ ಭಾವುಕರಾದ ಸಿದ್ದರಾಮಯ್ಯ, “ಮೇರುನಟ ಡಾ. ರಾಜ್‌ಕುಮಾರ್ ಅವರು ಜನರನ್ನು ‘ಅಭಿಮಾನಿ ದೇವರುಗಳು’ ಎಂದು ಕರೆಯುತ್ತಿದ್ದರು. ಒಬ್ಬ ರಾಜಕಾರಣಿಯಾಗಿ ನಾನು ಕೂಡ ಸಂವಿಧಾನವೇ ನನ್ನ ಧರ್ಮ ಎಂದು ತಿಳಿದುಕೊಂಡಿದ್ದೇನೆ. ನನ್ನ ಪಾಲಿಗೆ ಈ ರಾಜ್ಯದ ಮತದಾರರೇ ಅಭಿಮಾನಿ ದೇವರುಗಳು.

ನನಗೆ ರಾಜ್ಯದ ಜನತೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಮತ್ತು ಎರಡು ಬಾರಿ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಐತಿಹಾಸಿಕ ಅವಕಾಶವನ್ನು ನೀಡಿದ್ದಾರೆ” ಎಂದು ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ತಮಗೆ ಸದಾ ಬೆಂಬಲವಾಗಿ ನಿಂತ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಅವರು ತಮ್ಮ ಅಪಾರವಾದ ಧನ್ಯವಾದಗಳನ್ನು ಸಮರ್ಪಿಸಿದರು.

ಅಂದಹಾಗೆ ಈ ಮಹತ್ವದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಕೆ.ಜೆ. ಜಾರ್ಜ್, ಚಲುವರಾಯಸ್ವಾಮಿ ಹಾಗೂ ಡಾ. ಜಿ. ಪರಮೇಶ್ವರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com