ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.
Siddaramaiah  tender resignation
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.

ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.

ರಾಜ್ಯಪಾಲರು ಇಂದೋರ್ ಗೆ ತೆರಳಿರುವ ಕಾರಣ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.

ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ 7:30ಕ್ಕೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ, ಸಮಾಜವಾದಿ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Siddaramaiah  tender resignation
Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ಇದಕ್ಕೂ ಮುನ್ನಾ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ಲೋಕಭವನಕ್ಕೆ ತೆರಳಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com