

ಬೆಂಗಳೂರು: ನನಗೆ ಬಂದಿರುವ ಮಾಹಿತಿ ಪ್ರಕಾರ ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಳಿದಾಗ, "ವೇಣುಗೋಪಾಲ್ ಅವರು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವುದನ್ನು ಈಗಾಗಲೇ ತಿಳಿಸಿದ್ದಾರೆ.
ನಮ್ಮ ನಾಯಕರು ನಮ್ಮ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಎಲ್ಲಾ ತೀರ್ಮಾನ ಆದ ಬಳಿಕ ನಮ್ಮ ನಾಯಕರು ಮಾಹಿತಿ ನೀಡುತ್ತಾರೆ. ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ" ಎಂದು ತಿಳಿಸಿದರು. ನೀವು ಸಿಎಂ ಆಗಿ ಯಾವಾಗ ಪ್ರಮಾಣ ವಚನ ಸ್ವೀಕರಿಸುವಿರಿ ಎಂದು ಕೇಳಿದಾಗ, "ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಬೇಕಿದೆ. ನಂತರ ತೀರ್ಮಾನ ಆಗಲಿದೆ" ಎಂದು ತಿಳಿಸಿದರು.
Advertisement