ನಿಷೇಧದ ನಡುವೆಯೂ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದೇ ಎಂಇಎಸ್ ಕರಾಳ ದಿನ: ನಾಡವಿರೋಧಿ ಘೋಷಣೆ!

ಕರ್ನಾಟಕ ರಾಜ್ಯೋತ್ಸವದಂದೇ ಪ್ರತಿವರ್ಷದಂತೆ ಕರಾಳ ದಿನ ಆಚರಿಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದರೂ, ಎಂಇಎಸ್ ಕಾರ್ಯಕರ್ತರು ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Belagavi: MES stages Black Day rally defying district ban on Kannada Rajyotsava
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದೇ ಎಂಇಎಸ್ ಕರಾಳ ದಿನOnline Desk
Updated on: 

ಬೆಳಗಾವಿ: ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ನಿಷೇಧ ಹಾಗೂ ಅನುಮತಿ ನಿರಾಕರಣೆಯ ನಡುವೆಯೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಕಾರ್ಯಕರ್ತರು ನವೆಂಬರ್ 1 ರಂದು ಕರಾಳ ದಿನ ಆಚರಿಸಿ ಪುಂಡಾಟಿಕೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತ

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎಂಇಎಸ್‌ನ ಕರಾಳ ದಿನಾಚರಣೆ ಮತ್ತು ರ‍್ಯಾಲಿಗೆ ಅಧಿಕೃತವಾಗಿ ಅನುಮತಿ ನಿರಾಕರಿಸಿತ್ತು. ಅಷ್ಟೇ ಅಲ್ಲದೆ, ಗಡಿಯಲ್ಲಿ ಉದ್ವೇಗ ಸೃಷ್ಟಿಯಾಗದಂತೆ ತಡೆಯಲು ನೆರೆಯ ಮಹಾರಾಷ್ಟ್ರದ ಶಿವಸೇನಾ ಹಾಗೂ ಎಂಇಎಸ್‌ನ ಪ್ರಮುಖ ನಾಯಕರು ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಹೇರಲಾಗಿತ್ತು.

ಪೊಲೀಸರ ಮುಂದೆಯೇ ರ‍್ಯಾಲಿ, ಘೋಷಣೆ

ಈ ಎಲ್ಲಾ ಕಟ್ಟುನಿಟ್ಟಿನ ಆದೇಶಗಳನ್ನು ಮೀರಿ, ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಉದ್ಯಾನದ ಬಳಿ ಕಪ್ಪು ಬಟ್ಟೆ ಧರಿಸಿ ಒಟ್ಟುಗೂಡಿದರು. ಅಲ್ಲಿಂದ ಮರಾಠಾ ಮಂದಿರದವರೆಗೆ ಕರಾಳ ದಿನದ ಮೆರವಣಿಗೆ ನಡೆಸಿದ ಪುಂಡರು, ಪೊಲೀಸರ ಸಮ್ಮುಖದಲ್ಲೇ "ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು" ಎಂದು ನಾಡವಿರೋಧಿ ಘೋಷಣೆಗಳನ್ನು ಕೂಗಿದರು. ಏತನ್ಮಧ್ಯೆ, ಎಂಇಎಸ್‌ ಕಾರ್ಯಕರ್ತರ ಈ ಕೃತ್ಯವನ್ನು ಖಂಡಿಸಿ, ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಅವರ ರ‍್ಯಾಲಿಗೆ ನುಗ್ಗಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮುಂಜಾಗ್ರತಾ ಕ್ರಮವಾಗಿ ಗಡಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Belagavi: MES stages Black Day rally defying district ban on Kannada Rajyotsava
ಕರ್ನಾಟಕದ ವೈಭವೋಪೇತ ಪರಂಪರೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಿಸಿದೆ: ಕನ್ನಡಿಗರಿಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X