ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ KSRTC ಸಿಹಿಸುದ್ದಿ; 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ..!

ನವೆಂಬರ್ 8ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10ರಂದು ಬಲಿಪಾಡ್ಯಮಿ ಇರುವ ಹಿನ್ನೆಲೆಯಲ್ಲಿ ಈ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಸಂಚಾರ ಮತ್ತು ಸಾರಿಗೆ ನಿರ್ವಹಣಾ ಕೇಂದ್ರದಿಂದ (ಟಿಟಿಎಂಸಿ) ವಿಶೇಷ ಬಸ್‌ಗಳು ಹೊರಡಲಿವೆ.
KSRTC Buses
ಕೆಎಸ್ಆರ್ ಟಿಸಿ ಬಸ್ ಗಳ ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ದೀಪಾವಳಿ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,600 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಿದೆ.

ಹಬ್ಬ ಮುಗಿಸಿ ವಾಪಸ್‌ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ 10 ಮತ್ತು 11ರಂದು ರಾಜ್ಯದೊಳಗಿನ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ನವೆಂಬರ್ 8ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10ರಂದು ಬಲಿಪಾಡ್ಯಮಿ ಇರುವ ಹಿನ್ನೆಲೆಯಲ್ಲಿ ಈ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಸಂಚಾರ ಮತ್ತು ಸಾರಿಗೆ ನಿರ್ವಹಣಾ ಕೇಂದ್ರದಿಂದ (ಟಿಟಿಎಂಸಿ) ವಿಶೇಷ ಬಸ್‌ಗಳು ಹೊರಡಲಿವೆ.

ಬಿಎಂಟಿಸಿಯ ಶಾಂತಿನಗರ, ವಿಜಯನಗರ, ಯಶವಂತಪುರ ಮತ್ತು ಜಯನಗರ ಟಿಟಿಎಂಸಿಗಳು, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬಸವೇಶ್ವರನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಸೇರಿದಂತೆ ಇತರ ಬಸ್ ನಿಲ್ದಾಣಗಳಿಂದಲೂ ಹೆಚ್ಚುವರಿ ಮುಂಗಡ ಕಾಯ್ದಿರಿಸಿದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

KSRTC Buses
ಈ ಬಾರಿ ದೀಪಾವಳಿ ಪಟಾಕಿ ಸಿಡಿಸಲು 2 ಗಂಟೆ ಅವಕಾಶ: ನಿಯಮ ಮೀರಿದರೆ ಕಠಿಣ ಕ್ರಮ ಎಂದ ಸಚಿವ ರಾಮಲಿಂಗಾರೆಡ್ಡಿ; Video

ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಉಡುಪಿ, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಹೈದರಾಬಾದ್, ವಿಜಯವಾಡ ಮತ್ತು ತಿರುಪತಿ ಸೇರಿದಂತೆ ಹಲವು ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಮಡಿಕೇರಿ, ವಿರಾಜಪೇಟೆ ಸೇರಿದಂತೆ ವಿವಿಧ ಸ್ಥಳಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಚೆನ್ನೈ, ಕೊಯಮತ್ತೂರು, ಮಧುರೈ, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಮತ್ತು ಕೋಯಿಕ್ಕೋಡ್‌ಗೆ ತೆರಳುವ ಐಷಾರಾಮಿ ಬಸ್‌ಗಳು ಶಾಂತಿನಗರ ಟಿಟಿಎಂಸಿಯಿಂದ ಹೊರಡಲಿವೆ.

ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ 5ರಷ್ಟು ರಿಯಾಯಿತಿ ದೊರೆಯಲಿದೆ. ಹಾಗೆಯೇ ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X