

ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸಲ್ ಬ್ಲೇಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಪಟ್ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಬಸ್ ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿತ್ತು. ಮಾರ್ಗಮಧ್ಯೆ ಬಸ್‌ನ ಆಕ್ಸಲ್ ಬ್ಲೇಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಸ್ ಪಲ್ಟಿಯಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಒಟ್ಟು 41 ಮಂದಿ ಪ್ರಯಾಣಿಕರಿದ್ದರು.
ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.