ಹುಬ್ಬಳ್ಳಿ ಮೂಲಕ ಬೆಂಗಳೂರು-ಮುಂಬೈ ನಡುವೆ 2ನೇ Vande Bharat Sleeper Train ಸಂಚಾರ: ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್..!

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟ ಉದ್ಘಾಟನಾ ವಿಶೇಷ ರೈಲು ಸೋಮವಾರ ಬೆಳಗ್ಗೆ 6.15ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ತಲುಪಲಿದೆ.
Union Ministers Ashwini Vaishnaw,
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್
Updated on: 

ಬೆಂಗಳೂರು: ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಘೋಷಿಸಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲಿನ ಉದ್ಘಾಟನಾ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟ ಉದ್ಘಾಟನಾ ವಿಶೇಷ ರೈಲು ಸೋಮವಾರ ಬೆಳಗ್ಗೆ 6.15ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ತಲುಪಲಿದೆ.

ಪ್ರಸ್ತಾವಿತ ಎರಡನೇ ರೈಲು ಬೆಂಗಳೂರಿನಿಂದ ಹೊರಟು ಉತ್ತರ ಕರ್ನಾಟಕದ ಕೆಲವು ಭಾಗಗಳ ಮೂಲಕ ಹುಬ್ಬಳ್ಳಿ ತಲುಪಿ, ಅಲ್ಲಿಂದ ಪುಣೆ ಮಾರ್ಗವಾಗಿ ಮುಂಬೈಗೆ ಸಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಬೆಂಗಳೂರಿನ ಸಂಸದರೊಂದಿಗೆ ಸಮಾಲೋಚನೆ ನಡೆಸಿ ಈ ಮಾರ್ಗವನ್ನು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ರೈಲು ಆಂಧ್ರಪ್ರದೇಶದ ಕೆಲವು ಭಾಗಗಳ ಜತೆಗೆ ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೂ ಸಂಪರ್ಕ ಕಲ್ಪಿಸಲಿದೆ ಎಂದರು.

ಬೆಂಗಳೂರು ಮತ್ತು ಪುಣೆ ನಡುವಿನ ರೈಲು ಸಂಪರ್ಕ ಸುಧಾರಿಸಬೇಕೆಂಬ ಬೇಡಿಕೆಗಳ ಕುರಿತು ಮಾತನಾಡಿದ ಅವರು, ದೇಶದಲ್ಲಿ ಇನ್ನೂ 3,000 ಕಿ.ಮೀ. ಉದ್ದದ ಬುಲೆಟ್ ರೈಲು ಕಾರಿಡಾರ್‌ಗಳನ್ನು ಘೋಷಿಸಲಾಗುವುದು. ಇವುಗಳಲ್ಲಿ ಬೆಂಗಳೂರು-ಪುಣೆ ಮಾರ್ಗವೂ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Union Ministers Ashwini Vaishnaw,
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಅಶ್ವಿನಿ ವೈಷ್ಣವ್ ಚಾಲನೆ

ಕರ್ನಾಟಕದ ಇತರ ಭಾಗಗಳಿಗೂ ಬುಲೆಟ್ ರೈಲು ಸಂಪರ್ಕ ಕಲ್ಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಇನ್ನು ಕೆಲವೇ ವಾರಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಘೋಷಿಸಿದ ಅವರು, ಈ ಮಾರ್ಗದ ವಿದ್ಯುದೀಕರಣ ಹಾಗೂ ಪರೀಕ್ಷಾ ಕಾರ್ಯಗಳು ಪೂರ್ಣಗೊಂಡಿವೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಮೂಲಸೌಕರ್ಯ ವಿಸ್ತರಣೆ ಮತ್ತು ರೈಲ್ವೆ ಸುರಕ್ಷತೆ ಸುಧಾರಣೆಗೆ ದೊಡ್ಡ ಪ್ರಮಾಣದ ಹೂಡಿಕೆ ನೆರವಾಗಿದೆ ಎಂದು ಹೇಳಿದರು.

ಕವಚ್ ಸುರಕ್ಷತಾ ವ್ಯವಸ್ಥೆ ಜಾರಿಯಾದ ಬಳಿಕ ರೈಲು ಅಪಘಾತಗಳ ಸಂಖ್ಯೆ 135ರಿಂದ 16ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಈ ರೈಲು ಯೋಜನೆಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಬಿಹಾರ ಮೂಲದ ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X