Nandini ದರ ಏರಿಕೆ ವಿರುದ್ಧದ ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮೊಸರು ಬೆಲೆ ಕಡಿತಕ್ಕೆ ಸಿಎಂ ಶಿವಕುಮಾರ್ ಖಡಕ್ ಸೂಚನೆ!

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದೆ. ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
DK Shivakumar
ಡಿಕೆ ಶಿವಕುಮಾರ್
Updated on: 

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದೆ. ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಬೆಲೆ ಏರಿಕೆ ಜನರಿಗೆ ಹೆಚ್ಚು ಹೊರೆಯಾಗುತ್ತಿದೆ. ಹಾಲು ಮತ್ತು ಮೊಸರು ದೈನಂದಿನ ಬಳಕೆಯ ಅಗತ್ಯ ವಸ್ತುವಾಗಿದ್ದು ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರದ ಮೇಲೆ ಬೆಲೆ ಇಳಿಸುವಂತೆ ಒತ್ತಡ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಶಿವಕುಮಾರ್ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

DK Shivakumar
ನಂದಿನಿ ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಇಂದಿನಿಂದ ಕಾಫಿ, ಟೀ ಬೆಲೆಯಲ್ಲೂ ₹5 ಹೆಚ್ಚಳ!

ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ. ಆದರೆ ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಇಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮೊಸರಿನ ಬೆಲೆ ಎಷ್ಟು ಇಳಿಕೆಯಾಗಲಿದೆ, ಯಾವ ದಿನದಿಂದ ಹೊಸ ದರ ಜಾರಿಗೆ ಬರಲಿದೆ ಎಂಬ ಬಗ್ಗೆ ಅಧಿಕೃತ ಆದೇಶ ಹೊರಬಂದ ಬಳಿಕವೇ ಸ್ಪಷ್ಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X