'ಕೈ'ಪಾಳಯದಲ್ಲಿ ಶೀತಲ ಸಮರ: ಅಸಮಾಧಾನಿತ ನಾಯಕ ಮಹದೇವಪ್ಪ ಭೇಟಿಯಾದ ಯತೀಂದ್ರ ಸಿದ್ದರಾಮಯ್ಯ, ಮನವೊಲಿಸಲು ಕಸರತ್ತು..!

ಹಿಂದಿನ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ಪ ಅವರು ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
Mysuru district incharge minister Yathindra Siddaramaiah meets Congress leader Dr HC Mahadevappa in Mysuru on Sunday.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ಡಾ. ಹೆಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿದರು.
Updated on: 

ಮೈಸೂರು: ಹಳೇ ಮೈಸೂರು ಭಾಗದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಮತ ಹಾಗೂ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಶಾಸಕ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಭಾನುವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಹೈಪ್ರೊಫೈಲ್ 'ಲಂಚ್ ಮೀಟಿಂಗ್' ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ

ಹಿಂದಿನ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ಪ ಅವರು ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಹಾಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯತೀಂದ್ರ ಅವರು, ಮಹದೇವಪ್ಪ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಭೇಟಿ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ವೆಣುಗೋಪಾಲ್ ಕೂಡ ಇದ್ದರು.

ನವೆಂಬರ್ 26ರಂದು ಮೈಸೂರಿನಲ್ಲಿ ಪ್ರತ್ಯೇಕವಾಗಿ ಆಯೋಜಿಸಲು ಉದ್ದೇಶಿಸಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಈ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

Mysuru district incharge minister Yathindra Siddaramaiah meets Congress leader Dr HC Mahadevappa in Mysuru on Sunday.
ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರತಿಭಟನೆ..!

ಪಕ್ಷದ ಕೆಲವರ ಅಭಿಪ್ರಾಯದ ಪ್ರಕಾರ, ತಮ್ಮ ರಾಜಕೀಯ ಶಕ್ತಿಯನ್ನು ಪ್ರದರ್ಶಿಸುವ ಉದ್ದೇಶದಿಂದ ಮಹದೇವಪ್ಪ ಅವರು ಪ್ರತ್ಯೇಕ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನೊಂದೆಡೆ, ಸಿದ್ದರಾಮಯ್ಯ ಮತ್ತು ಯತೀಂದ್ರ ಅವರು ರಾಜ್ಯ ಸರ್ಕಾರದ ವತಿಯಿಂದ ನಗರದಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ.

ಇದರಿಂದ ಮೈಸೂರು ಭಾಗದ ಕಾಂಗ್ರೆಸ್‌ನಲ್ಲಿ ಪರಸ್ಪರ ಪೈಪೋಟಿಯ ರಾಜಕೀಯ ಬಣಗಳು ರೂಪುಗೊಳ್ಳುತ್ತಿವೆಯೇ ಎಂಬ ಚರ್ಚೆಗಳಿಗೆ ಮತ್ತಷ್ಟು ಬಲ ಬಂದಿದೆ.

ಆದರೆ, 2028ರ ವಿಧಾನಸಭಾ ಚುನಾವಣೆಗೆ ಮುನ್ನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ, ಮತ್ತಷ್ಟು ರಾಜಕೀಯ ಗೊಂದಲಗಳು ಉಂಟಾಗದಂತೆ ತಡೆಯಲು ಈ ಭೋಜನಕೂಟದ ಮೂಲಕ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಸಚಿವ ಸ್ಥಾನ ಕೈತಪ್ಪಿದ ಮಹದೇವಪ್ಪ ಸೇರಿದಂತೆ ಹಿರಿಯ ನಾಯಕರನ್ನು ಯತೀಂದ್ರ ಭೇಟಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಮಹದೇವಪ್ಪ, ಮಾಜಿ ಸಚಿವರಾದ ತನ್ವೀರ್ ಸೇಠ್ ಮತ್ತು ವೆಂಕಟೇಶ್ ಅವರು ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಸಭೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X