Sting Operation Row: CCBಯಿಂದ ತನಿಖೆ ಚುರುಕು; ಪವರ್ ಟಿವಿ ಕಚೇರಿ, ರಾಕೇಶ್ ಶೆಟ್ಟಿ ನಿವಾಸದ ಮೇಲೆ ದಾಳಿ, ತೀವ್ರ ಶೋಧ..!

ಸುಮಾರು 30 ಅಧಿಕಾರಿಗಳಿದ್ದ ಸಿಸಿಬಿ ತಂಡವು ಇಂದು ಏಕಕಾಲದಲ್ಲಿ ಎರಡೂ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ದಾಖಲೆಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪರಿಶೀಲಿಸುತ್ತಿದೆ.
File photo
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು, ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿ ಕಚೇರಿ ಹಾಗೂ ಅದರ ಮಾಲೀಕ ರಾಕೇಶ್ ಶೆಟ್ಟಿ ಅವರ ಕೊಡಿಗೇಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಸುಮಾರು 30 ಅಧಿಕಾರಿಗಳಿದ್ದ ಸಿಸಿಬಿ ತಂಡವು ಇಂದು ಏಕಕಾಲದಲ್ಲಿ ಎರಡೂ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ದಾಖಲೆಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ವಿರುದ್ಧ ಹರಿಬಿಡಲಾಗಿದ್ದ ವಿಡಿಯೊವನ್ನು ತಾವೇ ಚಿತ್ರೀಕರಿಸಿರುವುದಾಗಿ ರಾಕೇಶ್ ಶೆಟ್ಟಿ ಈ ಹಿಂದೆ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೆ, ಪವರ್ ಟಿವಿ ಕಚೇರಿ ಮೇಲೆ ದಾಳಿ ನಡೆಸಿದರೆ ಇಂತಹ ಇನ್ನೂ ಹಲವು ವಿಡಿಯೊಗಳು ಪತ್ತೆಯಾಗಲಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು.

ಈ ಹೇಳಿಕೆಗಳು ಹಾಗೂ ಪ್ರಕರಣದ ತನಿಖೆಯ ಬೆಳವಣಿಗೆಗಳ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಪವರ್ ಟಿವಿ ಕಚೇರಿ ಮತ್ತು ರಾಕೇಶ್ ಶೆಟ್ಟಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎರಡೂ ಸ್ಥಳಗಳಲ್ಲಿ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.

File photo
ಸ್ಟಿಂಗ್ ಆಪರೇಷನ್ ವಿವಾದದ ನಡುವೆ ಇಂದು ಸಂಜೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮಹತ್ವದ ಭೇಟಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X