'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ; ಬಂಧನಕ್ಕೆ ಆಗ್ರಹ; Video

ಇಂದು ಬೆಂಗಳೂರಿನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Congress workers staged a protest outside BJP leader Chaluvadi Narayanaswamy's residence
ಕಾಂಗ್ರೆಸ್ ಪ್ರತಿಭಟನೆ
Updated on: 

ಬೆಂಗಳೂರು: ಕೋಲಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಮಂಗಳವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದು ಬೆಂಗಳೂರಿನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಬ್ಯಾರಿಕೇಡ್ ದಾಟಿ ಬಿಜೆಪಿ ನಾಯಕನ ಮನೆ ಪ್ರವೇಶಿಸಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಛಲವಾದಿ ನಾರಾಯಣಸ್ವಾಮಿ ವಿರುದ್ಧ ಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸ್ ದಾಖಲಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ಛಲವಾದಿ ನಾರಾಯಣಸ್ವಾಮಿಯನ್ನು ಬಂಧಿಸದಿದ್ದರೆ ನಾಳೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Congress workers staged a protest outside BJP leader Chaluvadi Narayanaswamy's residence
'ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ': ನಾಲಿಗೆ ಹರಿಬಿಟ್ಟ ನಾರಾಯಣಸ್ವಾಮಿ!

ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ವೇಳೆ ಮಾತನಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದರು.

ಕಾಂಗ್ರೆಸ್ ಅರಾಜಕತೆ ಸೃಷ್ಠಿ ಮಾಡಿದ್ದೇ ಆದರೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರುಗಳು, ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X