‘ಮುರಸು’ ಚಂಡಮಾರುತ: ನ. 6ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ನಿರೀಕ್ಷೆ

ಚಂಡಮಾರುತದಿಂದ ಉಂಟಾಗಿರುವ ಮಳೆಯಿಂದ ರಾಜ್ಯದಲ್ಲಿ ಮಳೆಯ ಕೊರತೆ ಪ್ರಮಾಣ ಕಡಿಮೆಯಾಗಲಿದೆ ಎಂದು ಐಎಂಡಿಯ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on: 

ಹುಬ್ಬಳ್ಳಿ: ಚಂಡಮಾರುತ ‘ಮುರಸು’ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡಿನ ಕೆಲವು ಭಾಗಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಚಂಡಮಾರುತ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ನವೆಂಬರ್ 6ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಚಂಡಮಾರುತದಿಂದ ಉಂಟಾಗಿರುವ ಮಳೆಯಿಂದ ರಾಜ್ಯದಲ್ಲಿ ಮಳೆಯ ಕೊರತೆ ಪ್ರಮಾಣ ಕಡಿಮೆಯಾಗಲಿದೆ ಎಂದು ಐಎಂಡಿಯ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Representational image
ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ ಬೀಳುವ ಸಾಧ್ಯತೆ..!

ಸಿಡಿಲು ಬಡಿದು ರೈತ ಸಾವು; ಮೂವರಿಗೆ ಗಂಭೀರ ಗಾಯ

ನಿನ್ನೆ ಸೋಮವಾರ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮಾನ್ವಿ ತಾಲೂಕಿನ ಹರನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 55 ವರ್ಷದ ರೈತರೊಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಭಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಡಿಲು ಬಡಿದ ಪರಿಣಾಮ ಮಾರಿಯಮ್ಮ (45ವ), ಲತಾ (30ವ) ಮತ್ತು ಜ್ಯೋತಮ್ಮ (45ವ) ತೀವ್ರ ಸುಟ್ಟ ಗಾಯಗಳಿಂದ ಬಳಲಿದ್ದಾರೆ. ಗಾಯಾಳುಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Representational image
ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ, ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video

ರಾಯಚೂರು ನಗರ, ಸಿಂಧನೂರು, ಕವಿತಾಳ, ದೇವದುರ್ಗ ಮತ್ತು ಮಸ್ಕಿ ಪಟ್ಟಣಗಳಲ್ಲಿಯೂ ಸಾಧಾರಣದಿಂದ ಭಾರಿ ಮಳೆಯಾಗಿದೆ. ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪಿನ ಅನುಭವ ನೀಡಿದೆ.

ಕೊಡಗು ಜಿಲ್ಲೆಯ ಮಡಿಕೇರಿ ನಗರ ಮತ್ತು ಪೊನ್ನಂಪೇಟೆ ಪಟ್ಟಣದಲ್ಲಿಯೂ ಸೋಮವಾರ ಸಾಧಾರಣ ಮಳೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X