ಬೆಂಗಳೂರಿನಲ್ಲಿ ನ.5 ರಂದು SIR, CEC ವಿರುದ್ಧ ಇಂಡಿಯಾ ಬ್ಲಾಕ್ ಪ್ರತಿಭಟನೆ!

ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ತಾಲ್ಲೂಕು ಮತ್ತು ಬ್ಲಾಕ್ ಮಟ್ಟಕ್ಕೆ ಕೊಂಡೊಯ್ಯಲು ಇಂಡಿಯಾ ಬ್ಲಾಕ್ ನಾಯಕರು ನಿರ್ಧರಿಸಿದ್ದಾರೆ.
BK Hariprasad
ಬಿಕೆ ಹರಿಪ್ರಸಾದ್
Updated on: 

ಬೆಂಗಳೂರು: ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಮತ್ತು CEC ಜ್ಞಾನೇಶ್ ಕುಮಾರ್ ವಿರುದ್ಧ ನವೆಂಬರ್ 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಇಂಡಿಯಾ ಬ್ಲಾಕ್‌ನ ನಾಯಕರು ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯುಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, SIR ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್‌ ರಾಷ್ಟ್ರವ್ಯಾಪಿ ನಡೆಸುತ್ತಿರುವ ಪ್ರತಿಭಟನೆ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ"ನವೆಂಬರ್ 5 ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ತಾಲ್ಲೂಕು ಮತ್ತು ಬ್ಲಾಕ್ ಮಟ್ಟಕ್ಕೆ ಕೊಂಡೊಯ್ಯಲು ಇಂಡಿಯಾ ಬ್ಲಾಕ್ ನಾಯಕರು ನಿರ್ಧರಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆಯೊಂದಿಗೆ ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ, ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯುತ್ತದೆ. ರಾಜ್ಯ ಮಟ್ಟದ ಪ್ರತಿಭಟನೆಯ ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಎಸ್ ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವುದು ಮತ್ತು ಜ್ಞಾನೇಶ್ ಕುಮಾರ್ ರಾಜೀನಾಮೆ ಇಂಡಿಯಾ ಬ್ಲಾಕ್ ನ ಪ್ರಮುಖ ಬೇಡಿಕೆಯಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್ ಹೇಳಿದರು.

BK Hariprasad
'ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ': ನಾಲಿಗೆ ಹರಿಬಿಟ್ಟ ನಾರಾಯಣಸ್ವಾಮಿ!

ಪ್ರಜಾಪ್ರಭುತ್ವ ರಕ್ಷಿಸುವುದು ನಮ್ಮ ಜವಾಬ್ದಾರಿ. ಈ ಹೋರಾಟವನ್ನು ಇನ್ನಷ್ಟು ವ್ಯಾಪಕವಾಗಿ ಮುಂದುವರಿಸಲು 'ಇಂಡಿಯಾ' ಒಕ್ಕೂಟ ನಿರ್ಧರಿಸಿದೆ. ಭಾರತವನ್ನು ಸರ್ವಾಧಿಕಾರಿ ರಾಷ್ಟ್ರವನ್ನಾಗಿ ಬದಲಾಯಿಸುವ ಅಥವಾ ಕೋಮುವಾದಿ ಹಿಂದುತ್ವ ರಾಷ್ಟ್ರವನ್ನು ನಿರ್ಮಿಸುವ ಪ್ರಯತ್ನಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲು ಬಯಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X