ವಕೀಲರ ಸರಣಿ ಹತ್ಯೆ ಕೃತ್ಯಕ್ಕೆ ತೀವ್ರ ಆಕ್ರೋಶ: ಹೈಕೋರ್ಟ್ ಮುಂಭಾಗ ಸಾವಿರಾರು ವಕೀಲರಿಂದ ಪ್ರತಿಭಟನೆ

ಪ್ರತಿಭಟನಾಕಾರರು ಫಲಕಗಳನ್ನು ಪ್ರದರ್ಶಿಸಿ, ವಿಧಾನಸೌಧದ ಎದುರು ಕರಪತ್ರಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Advocates take part in a statewide protest in front of the High Court and Vidhana Soudha in Bengaluru on Tuesday.
ಬೆಂಗಳೂರಿನ ಹೈಕೋರ್ಟ್ ಮತ್ತು ವಿಧಾನಸೌಧದ ಮುಂದೆ ಮಂಗಳವಾರ ವಕೀಲರು ಪ್ರತಿಭಟನೆ ನಡೆಸಿದರು.
Updated on: 

ಬೆಂಗಳೂರು: ಸಹ ವಕೀಲರ ಹತ್ಯೆಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಹಾಗೂ ಬಲವಾದ ಕಾನೂನು ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಹೈಕೋರ್ಟ್ ಎದುರು 1,000ಕ್ಕೂ ಹೆಚ್ಚು ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿದರು.

ನೂರಾರು ವಕೀಲರು ವಿಧಾನಸೌಧದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸಿದರಾದರೂ, ಪಶ್ಚಿಮ ದ್ವಾರದ ಬಳಿ ಪೊಲೀಸರು ಅವರನ್ನು ತಡೆದರು.

ಪ್ರತಿಭಟನಾಕಾರರು ಫಲಕಗಳನ್ನು ಪ್ರದರ್ಶಿಸಿ, ವಿಧಾನಸೌಧದ ಎದುರು ಕರಪತ್ರಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ವೈಟ್‌ಫೀಲ್ಡ್‌ನಲ್ಲಿ ಮಂಜುನಾಥ್ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ಶ್ರೀರಾಮ್ ಎಂಬ ಇಬ್ಬರು ವಕೀಲರ ಹತ್ಯೆ ಹಾಗೂ ಗೌರಿಬಿದನೂರಿನಲ್ಲಿ ವಕೀಲ ವೆಂಕಟರಮಣ ಸನ್ನಕ್ಕಿ ಅವರ ಕೊಲೆಗೆ ಯತ್ನಿಸಿದ ಘಟನೆಗಳು ನಡೆದಿದ್ದು, ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮತ್ತು ಬೆಂಗಳೂರು ವಕೀಲರ ಸಂಘ (ಬಿಬಿಎ) ಜಂಟಿಯಾಗಿ ಪ್ರತಿಭಟನೆಗೆ ಕರೆ ನೀಡಿದ್ದವು.

ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Advocates take part in a statewide protest in front of the High Court and Vidhana Soudha in Bengaluru on Tuesday.
ಸೋತ ಅಭ್ಯರ್ಥಿಗಳಿಗೆ ಸಾರ್ವಜನಿಕ ಹುದ್ದೆ 'ಸಾಂತ್ವನ ಬಹುಮಾನ'ವಲ್ಲ; ಸರ್ಕಾರದ ಹಿಂಬಾಗಿಲ ನೇಮಕಕ್ಕೆ ಹೈಕೋರ್ಟ್ ತಡೆ..!

ಇದೇ ವೇಳೆ ವಕೀಲರ ರಕ್ಷಣಾ ಕಾಯ್ದೆಯಲ್ಲಿ ಜಾಮೀನು ರಹಿತ ಕಠಿಣ ಸೆಕ್ಷನ್‌ಗಳನ್ನು ಸೇರಿಸಬೇಕು ಹಾಗೂ ಕನಿಷ್ಠ 10 ವರ್ಷಗಳ ಶಿಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ಅಪರಾಧ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಪೊಲೀಸ್ ಠಾಣೆಗಳು ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿದರು.

ಪೊಲೀಸರು ಪರ್ಯಾಯ ನ್ಯಾಯಾಲಯಗಳಂತೆ ಕಾರ್ಯನಿರ್ವಹಿಸುತ್ತಿದ್ದು, ಆಫ್ರಿಕಾದ ಪೊಲೀಸ್ ನ್ಯಾಯಮಂಡಳಿಗಳನ್ನು ನೆನಪಿಸುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪೊಲೀಸ್ ಠಾಣೆಗಳು ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಕೇಂದ್ರಗಳಾಗಿ ಬದಲಾಗುತ್ತಿವೆ ಎಂದು ಟೀಕಿಸಿದರು.

ಇದೇ ವೇಳೆ, ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ವಕೀಲರ ರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X