ಮೈಸೂರು: ಡ್ರೋನ್ ಕ್ಯಾಮರಾದಲ್ಲಿ ನಾಲ್ಕು ಹುಲಿಗಳು ಪತ್ತೆ, ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭ; Video

ಎರಡು ದಿನಗಳ ಹಿಂದಷ್ಟೇ ಗ್ರಾಮದ ರೈತ ಪರಮೇಶ್ ಅವರ ಮೇಲೆ ಹುಲಿ ದಾಳಿ ಮಾಡಿತ್ತು. ಗಾಯಗೊಂಡಿರುವ ರೈತ ಚಿಕಿತ್ಸೆ ಪಡೆಯುತ್ತಿದ್ದಾರೆ.
Tiger
ಹುಲಿ ಪತ್ತೆ
Updated on: 

ಮೈಸೂರು: ನಂಜನಗೂಡು ತಾಲೂಕಿನ ಆಕಳ ಗ್ರಾಮದ ಸುತ್ತಮುತ್ತ ಡ್ರೋನ್ ಕ್ಯಾಮರಾದಲ್ಲಿ ಹುಲಿ ಮತ್ತು ಅದರ ಮೂರು ಮರಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರ ನಿತ್ಯ ಜೀವನದಲ್ಲಿ ಆತಂಕ ಉಂಟುಮಾಡಿದೆ.

ಎರಡು ದಿನಗಳ ಹಿಂದಷ್ಟೇ ಗ್ರಾಮದ ರೈತ ಪರಮೇಶ್ ಅವರ ಮೇಲೆ ಹುಲಿ ದಾಳಿ ಮಾಡಿತ್ತು. ಗಾಯಗೊಂಡಿರುವ ರೈತ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೋರನಕಟ್ಟೆ ಕಾಲೋನಿಯಲ್ಲಿ ಆದಿವಾಸಿ ಮಹಿಳೆಯನ್ನು ಹುಲಿ ಬಲಿ ಪಡೆದಿತ್ತು. ಈ ಘಟನೆ ಬಳಿಕ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿ, ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದರು.

ಇದೀಗ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾರ್ಯಾಚರಣೆಯ ಭಾಗವಾಗಿ ಡ್ರೋನ್ ಕ್ಯಾಮರಾ ಮೂಲಕ ಅರಣ್ಯ ಪ್ರದೇಶದಲ್ಲಿ ನಿಗಾ ವಹಿಸಲಾಗಿದ್ದು, ಕಳೆದ ರಾತ್ರಿ ನಾಲ್ಕು ಹುಲಿಗಳು ಕ್ಯಾಮರಾದಲ್ಲಿ ಸೆರೆಯಾಗಿವೆ.

Tiger
350 ಕಿ.ಮೀ ಸುದೀರ್ಘ ಸಂಚಾರ: ನಾಗರಹೊಳೆ ಹುಲಿ ಅಂಕೋಲಾ ಅರಣ್ಯದಲ್ಲಿ ಪತ್ತೆ !

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X