Dating ಆ್ಯಪ್ ಮೂಲಕ ಬಲೆ ಬೀಸಿದ ಖದೀಮರು; ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ, ದರೋಡೆ..!

ಮರುದಿನ ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದು, ಆಹಾರದ ಪೊಟ್ಟಣ ಪಡೆದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ದರೋಡೆ ಮಾಡಿದ್ದಾಗಿ ತಿಳಿಸಿದ್ದಾರೆ.
File photo
ಸಂಗ್ರಹ ಚಿತ್ಪ
Updated on: 

ಬೆಂಗಳೂರು: ಸಲಿಂಗಕಾಮಿಗಳ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಭೇಟಿಯಾಗಲು ಹೋದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ರಿಷಿರಾಜ್ ಸಿಂಗ್ (18), ವಂಶಿ (21), ವೆಂಕಟೇಶ್ (25) ಮತ್ತು ದರ್ಶನ್ (24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಎಲೆಕ್ಟ್ರಾನಿಕ್ಸ್ ಸಿಟಿ ಹಾಗೂ ಸುತ್ತಮುತ್ತಲಿನ ವಿವಿಧ ಪ್ರದೇಶಗಳ ನಿವಾಸಿಗಳಾಗಿದ್ದಾರೆ.

ಬೆಟ್ಟದಾಸನಪುರ ಮುಖ್ಯರಸ್ತೆಯ ನಿವಾಸಿಯಾಗಿರುವ ದೂರುದಾರರು ಸಲಿಂಗಕಾಮಿಗಳಿಗಾಗಿ ಇರುವ ಡೇಟಿಂಗ್ ಆ್ಯಪ್ ಬಳಸುತ್ತಿದ್ದರು.

ಈ ಆ್ಯಪ್ ಮೂಲಕ ಆರೋಪಿಗಳಲ್ಲಿ ಒಬ್ಬನ ಪರಿಚಯವಾಗಿತ್ತು. ಸುಮಾರು ಒಂದು ವಾರ ಇಬ್ಬರೂ ಸಂದೇಶಗಳನ್ನು ವಿನಿಮಯ ಮಾಡಿಕೊಂಡ ಬಳಿಕ ಭೇಟಿಯಾಗಲು ನಿರ್ಧರಿಸಿದ್ದರು.

File photo
ತಮಿಳುನಾಡಿಗೆ ಹೋಗ್ತೀನೆಂದು ಸುಳ್ಳು ಹೇಳಿ ಮಗಳ ಪ್ರಿಯಕರನಿಗೆ ಟ್ರ್ಯಾಪ್ ಇಟ್ಟ ತಂದೆ; ರೂಮಿನಲ್ಲಿ ಕೂಡಿಹಾಕಿ ಭೀಕರ ಹತ್ಯೆ..!

ಅದರಂತೆ ಭೇಟಿಯಾದಾಗ ಆರೋಪಿ, ಸಂತ್ರಸ್ತನನ್ನು ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆತನ ಮೂವರು ಸಹಚರರು ಕಾಯುತ್ತಿದ್ದರು ಎನ್ನಲಾಗಿದೆ. ಬಳಿಕ ನಾಲ್ವರೂ ಸೇರಿ ಚಾಕು ತೋರಿಸಿ ಬೆದರಿಸಿ, ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಸಂತ್ರಸ್ತನ ಮೊಬೈಲ್ ಫೋನ್ ಹಾಗೂ ಯುಪಿಐ ವಿವರಗಳನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ನಂತರ ಆತನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಂತ್ರಸ್ತನ ಸಂಬಂಧಿಕರು ಮತ್ತು ಸ್ನೇಹಿತರನ್ನು ಸಂಪರ್ಕಿಸಿ ಹೆಚ್ಚುವರಿ ಹಣವನ್ನೂ ಪಡೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರುದಿನ ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದು, ಆಹಾರದ ಪೊಟ್ಟಣ ಪಡೆದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ದರೋಡೆ ಮಾಡಿದ್ದಾಗಿ ತಿಳಿಸಿದ್ದಾರೆ. ಆದರೆ, ದೂರಿನಲ್ಲಿನ ಕೆಲವು ಅಂಶಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಘಟನೆಯ ಸಂಪೂರ್ಣ ವಿವರಗಳು ಬೆಳಕಿಗೆ ಬಂದಿವೆ. ಬಳಿಕ ಆರೋಪಿಗಳಲ್ಲಿ ಒಬ್ಬನನ್ನು ಪತ್ತೆಹಚ್ಚಿದ ಪೊಲೀಸರು, ಆತನ ಸುಳಿವಿನ ಆಧಾರದಲ್ಲಿ ಉಳಿದ ಮೂವರನ್ನೂ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X