

ಬೆಂಗಳೂರು: ಡಿಸೆಂಬರ್ 2 ರಿಂದ 11 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Winter Session) ನಡೆಯಲಿದೆ. ಅಧಿವೇಶನ ಕುರಿತು ವಿಧಾನಸಭೆ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
9 ದಿನಗಳ ಕಾಲ ನಡೆಯಲಿದ್ದು, ಶನಿವಾರವೂ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ನ.30 ರಿಂದ ಡಿ.11 ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ನಿಶ್ಚಿಯಿಸಲಾಗಿತ್ತು. ಅಲ್ಲದೇ ಈ ಕುರಿತ ಕಡತವನ್ನು ರಾಜ್ಯಪಾಲರ ಅನುಮೋದನೆಗಾಗಿ ಸಂಸದೀಯ ವ್ಯವಹಾರಗಳ ಇಲಾಖೆಯು ರಾಜ್ಯಪಾಲರಿಗೆ ಕಳುಹಿಸಿತ್ತು.
ಆದರೆ, ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಅಧಿವೇಶನ ದಿನಾಂಕದಲ್ಲಿ ಬದಲಾವಣೆಯಾಗಿದೆ.
ಸರ್ಕಾರದ ಸೂಚನೆ ಅನ್ವಯ ಕಡತವನ್ನು ವಾಪಸ್ ಪಡೆದುಕೊಂಡಿರುವ ಇಲಾಖೆಯು ಡಿ.2 ರಿಂದ ಅಧಿವೇಶನ ಆರಂಭಿಸುವ ಬಗ್ಗೆ ದಿನಾಂಕವನ್ನು ಮರು ನಿಗದಿಪಡಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಡತ ರವಾನಿಸಿತು. ಹೀಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಡಿ.2 ರಿಂದ 11ರವರೆಗೆ ಎಂಟು ದಿನ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.