ನಾಲ್ವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ: GBAಗೆ ವಿಶೇಷ ಆಯುಕ್ತರ ನೇಮಕ!

ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಶಾಲಾ ಶಿಕ್ಷಣ ಇಲಾಖೆ ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.
Vidhana Soudha
ವಿಧಾನಸೌಧ
Updated on: 

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಶಾಲಾ ಶಿಕ್ಷಣ ಇಲಾಖೆ ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಜಿಬಿಎ ವಿಶೇಷ ಆಯುಕ್ತರಾಗಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ನೇಮಕ ಮಾಡಲಾಗಿದ್ದರೆ, ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Vidhana Soudha
ನಮ್ಮ ಮೆಟ್ರೋ Pink Line ಉದ್ಘಾಟನೆಗಾಗಿ ನ. 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಇಲ್ಲಿದೆ ಸಂಪೂರ್ಣ ಪಟ್ಟಿ!

ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಸ್ಥಾನಕ್ಕೆ ಬೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಳ್ಳಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X