ನಮ್ಮ ಮೆಟ್ರೋ Pink Line ಉದ್ಘಾಟನೆಗಾಗಿ ನ. 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಇಲ್ಲಿದೆ ಸಂಪೂರ್ಣ ಪಟ್ಟಿ!

ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಅನ್ನು ಉದ್ಘಾಟಿಸಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಲಿದೆ.
Narendra Modi
ನರೇಂದ್ರ ಮೋದಿ
Updated on: 

ಬೆಂಗಳೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಅನ್ನು ಉದ್ಘಾಟಿಸಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಲಿದೆ.

ಮೋದಿ ವೇಳಾಪಟ್ಟಿ!

ನವೆಂಬರ್ 13ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಹೊರಟು ಬೆಳಗ್ಗೆ 10.5ಕ್ಕೆ ಬೆಂಗಳೂರಿನ HAL ಏರ್ ಪೋರ್ಟ್ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.40ಕ್ಕೆ ತಾವರೆಕರೆ ಮೆಟ್ರೋ ರೈಲು‌ ನಿಲ್ದಾಣಕ್ಕೆ ಅಗಮಿಸಲಿದ್ದು ಮಧ್ಯಾಹ್ನ 12.45ಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಮೆಟ್ರೋನಲ್ಲಿ ಐಐಎಂಬಿ ನಿಲ್ದಾಣದವರೆಗೆ ಪ್ರಯಾಣ ಮಾಡಲಿದ್ದಾರೆ.

Narendra Modi
ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗೆ ಚತುಷ್ಪಥ ಎಲಿವೇಟೆಡ್ ಕಾರಿಡಾರ್ ನಿರ್ಮಾಣ: 18 ತಿಂಗಳು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿರ್ಬಂಧ!

ನಂತರ ಮಧ್ಯಾಹ್ನ 1.15ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ವಿವಿಧ ಶಂಕುಸ್ಥಾಪನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಯೋಜನೆಗಳಿಗೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಮೈಸೂರಿಗೆ ಪ್ರಯಾಣಿಸಲಿದ್ದು ಅಲ್ಲಿ ಮಧ್ಯಾಹ್ನ 3.30ಕ್ಕೆ ಕೆ.ಸಿ. ಲೇಔಟ್ ಪಾರ್ಕ್ ನಲ್ಲಿ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಂಜೆ 4 ಗಂಟೆಗೆ ಮೈಸೂರು ಕಾಸ್ಮೋಸ್ ಉದ್ಘಾಟಿಸಲಿದ್ದು ಸಂಜೆ 6.05ಕ್ಕೆ ಮೈಸೂರಿನಿಂದ ನವದೆಹಲಿಗೆ ನಿರ್ಗಮಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X