ಹೊಸೂರಿನಲ್ಲಿ ಘೋರ ದುರಂತ: ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸಾವು

ಮೃತರನ್ನು ಕುಮರೇಶನ್(39), ಮೈಕೆಲ್(26) ಮತ್ತು ಶ್ರೀನಿವಾಸನ್(26) ಎಂದು ಗುರುತಿಸಲಾಗಿದೆ.
Three killed as under-construction structure of Hosur firm collapses
ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸಾವು
Updated on: 

ಬೆಂಗಳೂರು: ಬೆಂಗಳೂರು-ತಮಿಳುನಾಡಿನ ಗಡಿಭಾಗವಾದ ಹೊಸೂರಿನ ಸಿಪ್​​ಕಾಟ್​​ ಬಳಿ ಶುಕ್ರವಾರ ಕಾರ್ಖಾನೆಯ ಕಟ್ಟಡ ಕಾಮಗಾರಿ ವೇಳೆ ಘೋರ ದುರಂತ ಸಂಭವಿಸಿದ್ದು, ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಕುಮರೇಶನ್(39), ಮೈಕೆಲ್(26) ಮತ್ತು ಶ್ರೀನಿವಾಸನ್(26) ಎಂದು ಗುರುತಿಸಲಾಗಿದೆ.

Three killed as under-construction structure of Hosur firm collapses
ಬೀದರ್: ಲವರ್​​ ಮಾತು ನಂಬಿ ಗಂಡನಿಗೆ ಡಿವೋರ್ಸ್​ ಕೊಟ್ಟು ಬಂದ ಮಹಿಳೆ; ಬಳಿಕ ಪ್ರಿಯಕರ ನಾಪತ್ತೆ; ಮನೆ ಮುಂದೆ ಧರಣಿ!

ಬಾಲಾಜಿ ಗೇರ್ಸ್ ಹೆಸರಿನ ಖಾಸಗಿ ಕಾರ್ಖಾನೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾರ್ಮಿಕರು ಮೋಲ್ಡ್​​ಗೆ ಕಾಂಕ್ರೀಟ್​​ ಹಾಕುತ್ತಿದ್ದ ವೇಳೆ ಸೆಂಟ್ರಿಂಗ್​​ಗೆ ಹಾಕಿದ್ದ ಮರದ ದಿಮ್ಮಿಗಳು ಏಕಾಏಕಿ ಕುಸಿದಿವೆ. ಪರಿಣಾಮ ಕಟ್ಟಡದ ಅವಶೇಷಗಳಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್, ಎಸ್ಪಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳನ್ನು ಕ್ರೇನ್​​ ಬಳಸಿ ಹೊರಕ್ಕೆ ತೆಗೆಯಲಾಗಿದೆ.

ಕಾಂಕ್ರೀಟ್‌ನ ಭಾರವನ್ನು ತಡೆದುಕೊಳ್ಳಲು ಅಗತ್ಯವಾದ ಕಂಬಗಳು ಅಥವಾ ಸೂಕ್ತ ಯೋಜನೆ ಇರಲಿಲ್ಲ ಎಂದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ. ಹೀಗಾಗಿ, ಕಟ್ಟಡದ ವಿನ್ಯಾಸ ರೂಪಿಸಿದ ಎಂಜಿನಿಯರ್ ಸೇರಿದಂತೆ ಕಾಮಗಾರಿಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೊಸೂರು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X