ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಯಂತ್ರಗಳ ಬದಲು ಮತಪತ್ರಗಳ ಬಳಕೆ: ಸಚಿವ ಈಶ್ವರ ಖಂಡ್ರೆ; Video

ಹೊಸ ಮತದಾರರ ಪಟ್ಟಿಯನ್ನು ಬಳಸಬೇಕೇ ಅಥವಾ ಹಳೆಯ ಪಟ್ಟಿಯನ್ನೇ ಮುಂದುವರಿಸಬೇಕೇ ಎಂಬುದನ್ನು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.
Eshwar Khandre
ಈಶ್ವರ ಖಂಡ್ರೆ
Updated on: 

ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಮತಪತ್ರಗಳ ಮೂಲಕ ನಡೆಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಸಚಿವ ಸಂಪುಟ ಸಭೆಯ ಬಳಿಕ ತಿಳಿಸಿದ್ದಾರೆ.

ಹೊಸ ಮತದಾರರ ಪಟ್ಟಿಯನ್ನು ಬಳಸಬೇಕೇ ಅಥವಾ ಹಳೆಯ ಪಟ್ಟಿಯನ್ನೇ ಮುಂದುವರಿಸಬೇಕೇ ಎಂಬುದನ್ನು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಮತ್ತೆ ಮತಪತ್ರಗಳನ್ನು ಬಳಸುವ ಪ್ರಸ್ತಾವನೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನುಮೋದನೆ ನೀಡಿದೆ. ವಿದ್ಯುನ್ಮಾನ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಇರುವ ವಿಶ್ವಾಸ ಕೊರತೆಯ ಕುರಿತ ಕಳವಳಗಳನ್ನು ನಿವಾರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಕ್ರಮ ಅನ್ವಯವಾಗಲಿದೆ ಎಂದು ಹೇಳಿದರು.

ಮುಖ್ಯವಾಗಿ, ಈ ಬದಲಾವಣೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮಾತ್ರ ಅನ್ವಯಿಸುತ್ತದೆ. ಭಾರತ ಚುನಾವಣಾ ಆಯೋಗದ ನಿಯಮ ಪ್ರಕಾರ ಕರ್ನಾಟಕ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಇವಿಎಂಗಳ ಬಳಕೆ ಮುಂದುವರಿಯಲಿದೆ.

Eshwar Khandre
ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆ

ಕರ್ನಾಟಕದಲ್ಲಿ ಈ ಹಿಂದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿತ್ತು. 2014ರಲ್ಲಿ ಮಹಾನಗರ ಪಾಲಿಕೆಗಳು ಮತ್ತು ನಗರಸಭೆಗಳು ಸೇರಿದಂತೆ 155 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿತ್ತು. 2015ರಲ್ಲಿ ನಡೆದ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಇವಿಎಂಗಳನ್ನು ಬಳಸಲಾಗಿತ್ತು. ಆದರೆ, ಹಲವು ಗ್ರಾಮ ಪಂಚಾಯಿತಿ ಮತ್ತು ಸಹಕಾರ ಸಂಘಗಳ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆ ಮುಂದುವರಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X