ಯಾದಗಿರಿ: ಗೋಡೆಗೆ ಡಿಕ್ಕಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ

ಮೃತ ಯುವಕರನ್ನು ಗುರುರಾಜ್ ಚವ್ಹಾಣ್(35), ರೆಡ್ಡಿ ರಾಠೋಡ್(33), ಗೋವಿಂದ ಚವ್ಹಾಣ್(28) ಮತ್ತು ಕುಮಾರ್​ ರಾಠೋಡ್(26) ಎಂದು ಗುರುತಿಸಲಾಗಿದೆ.
Four youths killed in car accident in Shahapur
ಗೋಡೆಗೆ ಡಿಕ್ಕಿ ಹೊಡೆದ ಕಾರು
Updated on: 

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್​ ಕ್ಯಾಂಪ್ ಬಳಿ ನಿರ್ಮಾಣ ಹಂತದ ಎಕ್ಸ್‌ಪ್ರೆಸ್ ವೇಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ಗುರುರಾಜ್ ಚವ್ಹಾಣ್(35), ರೆಡ್ಡಿ ರಾಠೋಡ್(33), ಗೋವಿಂದ ಚವ್ಹಾಣ್(28) ಮತ್ತು ಕುಮಾರ್​ ರಾಠೋಡ್(26) ಎಂದು ಗುರುತಿಸಲಾಗಿದೆ.

ಲಿಂಗೇರಿ ತಾಂಡಾದ ಓರ್ವ ಯುವಕ ಸೇರಿ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ನಿರ್ಮಾಣ ಹಂತದ ಚೆನ್ನೈ-ಸೂರತ್​ ಎಕ್ಸ್‌ಪ್ರೆಸ್‌ ವೇನಲ್ಲಿ ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ತಡೆ ಗೋಡೆಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Four youths killed in car accident in Shahapur
ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ: ಹೊತ್ತಿ ಉರಿದ ನಾಲ್ಕು ಬೋಗಿಗಳು; Video

ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X