ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬೇಡಿಕೆಗೆ ಕೋರ್ಟ್ ಅಸ್ತು; ಆದರೆ ಷರತ್ತುಗಳು ಅನ್ವಯ!

ಬೆನ್ನು ನೋವಿಗೆ ಸೂಕ್ತ ಚಿಕಿತ್ಸೆಗೆ ಅವಕಾಶ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಹೆಚ್ ಕೋರ್ಟ್, ಆರೋಪಿಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ.
Renukaswamy murder case: Actor Darshan gets court nod for physiotherapy inside jail
ನಟ ದರ್ಶನ್
Updated on: 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಶನಿವಾರ ಕೋರ್ಟ್ ಅನುಮತಿ ನೀಡಿದೆ.

ಬೆನ್ನು ನೋವಿಗೆ ಸೂಕ್ತ ಚಿಕಿತ್ಸೆಗೆ ಅವಕಾಶ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಹೆಚ್ ಕೋರ್ಟ್, ಆರೋಪಿಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೆಲ ಷರತ್ತುಗಳ ಅನ್ವಯ ಅವಕಾಶ ಮಾಡಿಕೊಟ್ಟಿದೆ.

ದರ್ಶನ್ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ಫಿಸಿಯೋಥೆರಪಿ ಹಾಗೂ ಬೆನ್ನು ನೋವಿಗೆ ಸಂಬಂಧಿಸಿದ ಇತರೆ ಚಿಕಿತ್ಸೆಗಳನ್ನು ಸಹ ದರ್ಶನ್ ಅವರು ಜೈಲಿನ ಆವರಣದಲ್ಲಿಯೇ ಪಡೆಯಬಹುದಾಗಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜೈಲಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೆ ಹೊರಗಿನ ಆಸ್ಪತ್ರೆ ಮೂಲಕ ಫಿಸಿಯೋಥೆರಪಿ ಪಡೆಯುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ.

Renukaswamy murder case: Actor Darshan gets court nod for physiotherapy inside jail
ನಟ ದರ್ಶನ್‌ಗೆ ಮತ್ತೆ ತೀವ್ರ ಬೆನ್ನು ನೋವು: ಫಿಸಿಯೋಥೆರಪಿಗೆ ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ!

ಈ ಅರ್ಜಿಯ ವಿಚಾರಣೆ ವೇಳೆ ದರ್ಶನ್‌ ಪರ ವಕೀಲ ಹಷ್ಮತ್ ಪಾಷ, ದರ್ಶನ್‌ ಅವರಿಗೆ ಕೆಲವು ವರ್ಷಗಳಿಂದಲೂ ಬೆನ್ನು ನೋವಿನ ಸಮಸ್ಯೆ ಇದೆ. ಕಳೆದ ಬಾರಿ ಅರೆಸ್ಟ್ ಆಗಿದ್ದ ವೇಳೆಯೂ ಬೆನ್ನು ನೋವಿಗೆ ಫಿಜಿಯೋಥೆರಪಿ ಚಿಕಿತ್ಸೆ ಪಡೆದಿದ್ದರು. ಹಾಗಾಗಿ ಈ ಬಾರಿಯೂ ಜೈಲಿನಲ್ಲೆ ಫಿಜಿಯೋಗೆ ಅವಕಾಶ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಎಸ್‌ಪಿಪಿ, ಕಳೆದ ಬಾರಿ ಜಾಮೀನು ಪಡೆಯುವ ವೇಳೆಯೂ ಇದೇ ಪ್ರಮುಖ ಕಾರಣ ನೀಡಿ ಜಾಮೀನು ಪಡೆದಿದ್ದರು. ಆಪರೇಷನ್ ಮಾಡಿಸಿಕೊಳ್ಳುವುದಾಗಿ ಹೇಳಿ ಜಾಮೀನು ಪಡೆದು ನಂತರ ಯಾವುದೇ ಆಪರೇಷನ್ ಮಾಡಿಸಿಕೊಂಡಿರಲಿಲ್ಲ. ಮತ್ತೊಮ್ಮೆ ಚಿಕಿತ್ಸೆ ಬಗ್ಗೆ ಕೇಳ್ತಿದ್ದಾರೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಫಿಜಿಯೋಥೆರಪಿ ನೀಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X