ಹಾವೇರಿ: ರಸ್ತೆ ಕೆಲಸ ಮಾಡುತ್ತಿದ್ದ ವೇಳೆ ಭೀಕರ ಅಪಘಾತ, ಕಾರು ಡಿಕ್ಕಿಯಾಗಿ ಇಬ್ಬರು ‌ಮಹಿಳೆಯರು ಸಾವು!

ರಾಣೇಬೆನ್ನೂರಿನ ದೇವರಗುಡ್ಡ ಗ್ರಾಮದ ಬಳಿ ರಸ್ತೆ ಕೆಲಸ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ‌ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯರನ್ನ 30 ವರ್ಷದ ಮೇಘನಾ ಮತ್ತು 50 ವರ್ಷದ ಶೈಲಜಾ ಮೇಕಳಿ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಹಾವೇರಿ: ರಾಣೇಬೆನ್ನೂರಿನ ದೇವರಗುಡ್ಡ ಗ್ರಾಮದ ಬಳಿ ರಸ್ತೆ ಕೆಲಸ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ‌ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯರನ್ನ 30 ವರ್ಷದ ಮೇಘನಾ ಮತ್ತು 50 ವರ್ಷದ ಶೈಲಜಾ ಮೇಕಳಿ ಎಂದು ಗುರುತಿಸಲಾಗಿದೆ. ರಸ್ತೆ ಕೆಲಸ ಮಾಡುತ್ತಿದ್ದ ವೇಳೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ತರಲಾಗಿದೆ.

ಸಾಂದರ್ಭಿಕ ಚಿತ್ರ
ಯಾದಗಿರಿ: ಗೋಡೆಗೆ ಡಿಕ್ಕಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X