ಡಿಸೆಂಬರ್ 2 ಬೆಳಗಾವಿ ಅಧಿವೇಶನಕ್ಕೆ ಮುನ್ನ ಮಹಿಳೆಗೆ ಸಚಿವ ಸ್ಥಾನ: ಸಿಎಂ ಡಿಕೆ ಶಿವಕುಮಾರ್; Video

ಕಳೆದ ಐದು ತಿಂಗಳಿಂದ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಪ್ರಕಾರ, ಡಿಸೆಂಬರ್ 2ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ.
Chief Minister D K Shivakumar interacts with beneficiaries of Gruha Lakshmi scheme, in Bengaluru on Friday.
ಬೆಂಗಳೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಾದ ನಡೆಸಿದರು.
Updated on: 

ಬೆಂಗಳೂರು: ಮುಂದಿನ ಬೆಳಗಾವಿ ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ಸಚಿವ ಸಂಪುಟಕ್ಕೆ ಮಹಿಳೆಯೊಬ್ಬರನ್ನು ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ವೇಳೆ ಅವರು ಈ ಭರವಸೆ ನೀಡಿದ್ದಾರೆ.

ಕಳೆದ ಐದು ತಿಂಗಳಿಂದ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಪ್ರಕಾರ, ಡಿಸೆಂಬರ್ 2ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ.

Chief Minister D K Shivakumar interacts with beneficiaries of Gruha Lakshmi scheme, in Bengaluru on Friday.
'ಗೃಹಲಕ್ಷ್ಮಿ' ಹಣದಿಂದ ಕರಕುಶಲ ಉದ್ಯಮ ಕಟ್ಟಿಕೊಂಡ ಕಲಬುರಗಿಯ ಸುವರ್ಣ: ಮೊಮ್ಮಗಳಿಗೆ ಮಣಿ ತೊಟ್ಟಿಲ ಆಟಿಕೆ ಖರೀದಿಸಿ ಖುಷಿಪಟ್ಟ ಸಿಎಂ

ಸಂವಾದ ವೇಳೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಡ್ಡಿಗೆ ಸಾಲ ನೀಡುವ ವ್ಯವಹಾರ ಅಥವಾ ಚಿಟ್ ಫಂಡ್‌ಗಳಲ್ಲಿ ಹೂಡಿಕೆ ಮಾಡದಂತೆ ಮಹಿಳಾ ಫಲಾನುಭವಿಗಳಿಗೆ ಡಿ ಕೆ ಶಿವಕುಮಾರ್ ಸಲಹೆ ನೀಡಿದರು.

ಇಂತಹ ಹೂಡಿಕೆಗಳ ಹಿಂದೆ ಅಪರಾಧ ಚಟುವಟಿಕೆಗಳೂ ಇರುತ್ತವೆ ಎಂಬ ಅರಿವು ಅವರಿಗಿಲ್ಲ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂತಹ ಯಾವುದೇ ವ್ಯವಹಾರಗಳಲ್ಲಿ ಹೂಡಿಕೆ ಮಾಡಬಾರದು ಎಂದು ನಾನು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒದಗಿಸಿರುವ ಒಟ್ಟು ಮೊತ್ತ ಶೀಘ್ರದಲ್ಲೇ 1 ಲಕ್ಷ ಕೋಟಿ ರೂಪಾಯಿ ತಲುಪಲಿರುವ ಹಿನ್ನೆಲೆಯಲ್ಲಿ, ಜಿಲ್ಲಾವಾರು ಮಹಿಳಾ ಫಲಾನುಭವಿಗಳೊಂದಿಗೆ ಸಂವಾದ ನಡೆಸುವುದಾಗಿ ಡಿ ಕೆ ಶಿವಕುಮಾರ್ ತಿಳಿಸಿದರು.

ಸಂವಾದ ವೇಳೆ ಹಲವು ಮಹಿಳೆಯರು ಶಕ್ತಿ ಯೋಜನೆಯಿಂದ ತಮಗೆ ಅನುಕೂಲವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬ ಆಶಯವನ್ನೂ ಕೆಲವರು ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಕ್ಕಳ ಶಿಕ್ಷಣಕ್ಕಾಗಿ ಬಳಸಿಕೊಂಡಿರುವುದಾಗಿ ಕೆಲವು ಫಲಾನುಭವಿಗಳು ತಿಳಿಸಿದರು. ಇನ್ನು ಕೆಲವರು ಈ ಹಣದಿಂದ ಮನೆಯಲ್ಲಿ ಸಣ್ಣ ಉದ್ಯಮಗಳನ್ನು ಆರಂಭಿಸಿರುವುದಾಗಿ ಹೇಳಿಕೊಂಡರು. ಒಬ್ಬ ಮಹಿಳೆ ತಾವು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ದ್ವಿಚಕ್ರ ವಾಹನ ಖರೀದಿಸಿರುವುದಾಗಿ ತಿಳಿಸಿದರು.

ಸಂವಾದ ವೇಳೆ ಮುಖ್ಯಮಂತ್ರಿ 'ತಾಯಿ ಸತ್ತ ಮೇಲೆ ತವರಿಗೆ ಹೋಗಬಾರದವ್ವ...' ಎಂಬ ಜನಪದ ಗೀತೆಯನ್ನು ಹಾಕಿ ಕೇಳಿಸಿದರು. ಈ ಹಾಡೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ಪ್ರೇರಣೆಯಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X