ಸಿಎಂ ಶಿವಕುಮಾರ್ ಹಾಸನಾಂಬೆ ದರ್ಶನ ಪಡೆಯುತ್ತಿರುವ ವಿಡಿಯೋಗೆ ಆಕ್ರೋಶಿತ ಭಕ್ತರಿಂದ ಚಪ್ಪಲಿ ಎಸೆತ, Video!

ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆಯಲು ಸಾವಿರಾರೂ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಆದರೆ ಸಿಎಂ ಡಿಕೆ ಶಿವಕುಮಾರ್ ಅವರು ದೇವಿಯ ದರ್ಶನ ಪಡೆಯಲು ಆಗಮಿಸಿದ್ದರಿಂದ ಭಕ್ತರು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲಬೇಕಾಯಿತು.
DK Shivakumar
ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಕೆ ಶಿವಕುಮಾರ್
Updated on: 

ಹಾಸನ: ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆಯಲು ಸಾವಿರಾರೂ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಆದರೆ ಸಿಎಂ ಡಿಕೆ ಶಿವಕುಮಾರ್ ಅವರು ದೇವಿಯ ದರ್ಶನ ಪಡೆಯಲು ಆಗಮಿಸಿದ್ದರಿಂದ ಭಕ್ತರು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲಬೇಕಾಯಿತು. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಕಾದು ಸುಸ್ತಾಗಿದ್ದ ಭಕ್ತರು ಗರ್ಭಗುಡಿಯಲ್ಲಿ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಪ್ರಸಾರವಾಗುತ್ತಿದ್ದ ಎಲ್‌ಇಡಿ ಪರದೆಗೆ ಚಪ್ಪಲಿ ಎಸೆಯುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕಾಗಿ ಬಂದಿದ್ದು ಗಂಟೆಗಂಟಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಇಂದು ಕುಟುಂಬ ಸಮೇತ ಡಿಕೆ ಶಿವಕುಮಾರ್ ದೇವಾಲಯಕ್ಕೆ ಭೇಟಿ ನೀಡಿದ್ದರಿಂದ ಸಾಮಾನ್ಯ ಭಕ್ತರ ದರ್ಶನಕ್ಕೆ ವಿಳಂಬವಾಗಿತ್ತು. ಇದರಿಂದ ಬೇಸತ್ತ ಭಕ್ತರು ದಿಢೀರನೆ ಆಕ್ರೋಶಗೊಂಡಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣಗಳನ್ನು ಕೂಗಿದರು. ಅಷ್ಟಕ್ಕೆ ಸುಮ್ಮನಾಗದ ಭಕ್ತರು ತನ್ನ ಚಪ್ಪಲಿ ತೆಗೆದು ಪರದೆಯತ್ತ ಎಸೆದಿದ್ದಾರೆ.

DK Shivakumar
ಹಾಸನಾಂಬೆ ದರ್ಶನ ಪಡೆದ ಸಿದ್ದರಾಮಯ್ಯ; ಡಿಸಿ, ಎಸ್‌ಪಿ ಎಡವಟ್ಟಿನಿಂದ ದಾರಿ ತಪ್ಪಿದ ಮಾಜಿ ಸಿಎಂ ಕಾರು!

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನವನ್ನು ಕಳೆದ ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದಿದ್ದರು. ಇದರ ಬೆನ್ನಲ್ಲೇ ಇಂದು ಡಿಕೆ ಶಿವಕುಮಾರ್ ಸಹ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಇದರ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X