ಚಿಕ್ಕಮಗಳೂರು: ದೇವಿರಮ್ಮ ಬೆಟ್ಟ ಹತ್ತುವಾಗ ಯುವಕ ಸಾವು, ಕಂಬಿ ಮುರಿದು 20 ಮಂದಿಗೆ ಗಂಭೀರ ಗಾಯ!

ಹೌದು, ಭಾನುವಾರ ಮುಂಜಾನೆ ಬೆಟ್ಟ ಏರುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮಣ್(35) ಎಂಬ ಯುವಕ ಹೃದಯಾಘಾತದಿಂದ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದರು.
Deviramma Betta
ದೇವಿರಮ್ಮ ಬೆಟ್ಟ
Updated on: 

ಚಿಕ್ಕಮಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಾನುವಾರ ಮುಂಜಾನೆ ಯುವಕನೋರ್ವ ಸಾವನ್ನಪ್ಪಿದ್ದಾರೆ. ಇದಾದ ಬೆನ್ನಲ್ಲೇ ಸಂಭವಿಸಿದ ದುರಂತವೊಂದರಲ್ಲಿ 20 ಮಂದಿ ಗಾಯಗೊಂಡಿದ್ದಾರೆ.

ಹೌದು, ಭಾನುವಾರ ಮುಂಜಾನೆ ಬೆಟ್ಟ ಏರುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮಣ್(35) ಎಂಬ ಯುವಕ ಹೃದಯಾಘಾತದಿಂದ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದರು. ಈ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಬೈಪಾಸ್ ಸರ್ಜರಿ ಮಾಡಿಕೊಂಡಿದ್ದ ಇವರು ರವಿವಾರ ಮುಂಜಾನೆ ಸ್ನೇಹಿತರೊಂದಿಗೆ ದೇವಿರಮ್ಮ ಬೆಟ್ಟ ಏರುತ್ತಿದ್ದ ವೇಳೆ ಉಸಿರಾಟದ ತೊಂದರೆಯಿಂದ ಕುಸಿದು ಬಿದ್ದಿದ್ದಾರೆ.

ಕೂಡಲೇ ರಕ್ಷಣಾ ಸಿಬ್ಬಂದಿ ಲಕ್ಷ್ಮಣ್ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆ ಸಂಬಂದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಜೆ ಭಕ್ತರು ದೇವಿಯ ದರ್ಶನ ಪಡೆಯಲು ಬೆಟ್ಟ ಏರುವ ಸಂದರ್ಭದಲ್ಲಿ ಬೆಟ್ಟದ ಇಳಿಜಾರಿನಲ್ಲಿ ತಡೆಗೋಡೆಗೆ ಹಾಕಿದ್ದ ಕಂಬಿಯೊಂದು ಮುರಿದ ಪರಿಣಾಮ ಒಬ್ಬರ ಮೇಲೊಬ್ಬರು ಬಿದ್ದು 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ವರ್ಷಕ್ಕೊಮ್ಮೆ ಮಾತ್ರ ತೆರೆಯುವ ದೇವಿರಮ್ಮನ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಹರಿದುಬಂದಿದ್ದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಂಡಿಗ ದೇವಿರಮ್ಮನ ಬೆಟ್ಟ ಏರಿ ದೇವರ ದರ್ಶನ ಪಡೆಯುವುದು ವಾಡಿಕೆಯಾಗಿದ್ದು, ಅದರಂತೆ ಈ ಬಾರಿಯೂ ಶನಿವಾರ ರಾತ್ರಿಯಿಂದಲೇ ಬೆಟ್ಟ ಏರಲು ಸಾವಿರಾರು ಭಕ್ತರು ಆಗಮಿಸಿದ್ದರು. ಭಾನುವಾರ ಮಧ್ಯಾಹ್ನದ ವೇಳೆ ಬೆಟ್ಟ ಏರಲು ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಟ್ಟದ ಇಳಿಜಾರಿನಲ್ಲಿ ತಡೆಗೋಡೆಯಂತೆ ಹಾಕಲಾಗಿದ್ದ ಕಬ್ಬಿಣದ ಕಂಬಿಯೊಂದು ಮುರಿದಿದೆ. ಈ ವೇಳೆ ಕಂಬಿ ಹಿಡಿದು ಬೆಟ್ಟ ಏರುತ್ತಿದ್ದ ಭಕ್ತರು ಒಬ್ಬರ ಮೇಲೊಬ್ಬರಂತೆ ಬಿದ್ದಿದ್ದಾರೆ. ಪರಿಣಾಮ 20 ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

Deviramma Betta
ಸಿಎಂ ಶಿವಕುಮಾರ್ ಹಾಸನಾಂಬೆ ದರ್ಶನ ಪಡೆಯುತ್ತಿರುವ ವಿಡಿಯೋಗೆ ಆಕ್ರೋಶಿತ ಭಕ್ತರಿಂದ ಚಪ್ಪಲಿ ಎಸೆತ, Video!

ಗಾಯಾಳುಗಳನ್ನು ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ರಕ್ಷಣೆ ಮಾಡಿ ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಎಲ್ಲ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X