ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರದ ಕೈವಾಡ: 6 ತಿಂಗಳಲ್ಲಿ ಜೈಲಿಗೆ ಕಳುಹಿಸುತ್ತೇವೆ ಎಂದು RSS ವಿರುದ್ದ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಗೌರಿ ಲಂಕೇಶ್ ಮತ್ತು ಎಂ. ಎಂ. ಕಲ್ಬುರ್ಗಿ ಹತ್ಯೆಯ ಹಿಂದೆ RSS ಕೈವಾಡವಿದ್ದು, ಆರು ತಿಂಗಳೊಳಗೆ ತನಿಖೆ ಹಾಗೂ ವಿಚಾರಣೆಯನ್ನು ಮುಗಿಸಿ, ಇದರ ಹಿಂದಿರುವ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Priyank Kharge
ಪ್ರಿಯಾಂಕ್ ಖರ್ಗೆOnline Desk
Updated on: 

ಕೊಚ್ಚಿ (ಕೇರಳಂ): ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರವಾದಿ ಪ್ರೊ. ಎಂ.ಎಂ. ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರದ ಕೈವಾಡವಿದೆ ಎಂದು ಗಂಭೀರವಾಗಿ ಆರೋಪಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಈ ಪ್ರಕರಣದ ಆರೋಪಿಗಳನ್ನು ಮುಂದಿನ ಆರು ತಿಂಗಳಲ್ಲಿ ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕೊಚ್ಚಿಯ ಮರೀನ್ ಡ್ರೈವ್‌ನಲ್ಲಿ ನಡೆದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಂಗಸಂಸ್ಥೆಯಾದ ಮುಸ್ಲಿಂ ಯೂತ್ ಲೀಗ್ ರಾಜ್ಯ ಸಮಾವೇಶದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಮುಸ್ಲಿಂ ಯೂತ್ ಲೀಗ್‌ನ ಪ್ರಧಾನ ಕಾರ್ಯದರ್ಶಿ ಪಿ.ಕೆ. ಫಿರೋಸ್, ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆಗಳ ಬಗ್ಗೆ ಪ್ರಸ್ತಾಪಿಸಿದ ನಂತರ ಪ್ರತಿಕ್ರಿಯೆ ನೀಡಿದ ಖರ್ಗೆ, "ಪತ್ರಕರ್ತೆ ಗೌರಿ ಲಂಕೇಶ್, ವಿಚಾರವಾದಿ ಪ್ರೊ. ಎಂ.ಎಂ. ಕಲಬುರ್ಗಿ ಮತ್ತು ನರೇಂದ್ರ ದಾಭೋಲ್ಕರ್ ಹತ್ಯೆಗಳ ಹಿಂದೆ ಸಂಘ ಪರಿವಾರಕ್ಕೆ ಸೇರಿದವರೇ ಇದ್ದಾರೆ. ಗಾಂಧೀಜಿಯನ್ನು ಕೊಂದವರೇ ಇವರನ್ನೂ ಕೊಂದಿದ್ದಾರೆ" ಎಂದು ನೇರವಾಗಿ ಆರೋಪಿಸಿದರು.

Priyank Kharge
ಅವರಿವರಿಗೆ ಬೈಯುವುದನ್ನು ಬಿಟ್ಟು, ರೈತರ ಸಭೆ ನಡೆಸಲು ಸಚಿವರಿಗೆ ಧಮ್ ಇಲ್ಲವೇ? ಪ್ರಿಯಾಂಕ್ ಖರ್ಗೆ ವಿರುದ್ಧ ಮಾಶ್ಯಾಳ ಮಠದ ಸ್ವಾಮೀಜಿ ಏಕವಚನದಲ್ಲಿ ವಾಗ್ದಾಳಿ!

6 ತಿಂಗಳಲ್ಲಿ ಶಿಕ್ಷೆಯ ಭರವಸೆ

ಮುಂದುವರೆದು, "ಪ್ರಸ್ತುತ ಈ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಫಾಲೋ-ಅಪ್ ಮಾಡುತ್ತಿದೆ. ಮುಂದಿನ 6 ತಿಂಗಳಲ್ಲಿ ಇಡೀ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಇವರೆಲ್ಲರನ್ನೂ ಜೈಲಿಗೆ ಕಳುಹಿಸುತ್ತೇವೆ" ಎಂದ ಖರ್ಗೆ, ಸಾವರ್ಕರ್ ಹಾಗೂ ಸಂಘ ಪರಿವಾರದ ಸಿದ್ಧಾಂತಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಇದೇ ವೇಳೆ ಟೀಕಿಸಿದರು. ಜೊತೆಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಆರ್‌ಎಸ್‌ಎಸ್‌ನ 10 ನಾಯಕರ ಹೆಸರು ಹೇಳಿ ಎಂದು ಸವಾಲು ಹಾಕಿ, ಕ್ವಿಟ್ ಇಂಡಿಯಾ ಚಳವಳಿ ಮತ್ತು ಸಂವಿಧಾನದ ವಿಚಾರದಲ್ಲಿ ಆರ್‌ಎಸ್‌ಎಸ್ ಇತಿಹಾಸವನ್ನು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X