ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು: ಸಿಎಂ ಡಿಕೆ ಶಿವಕುಮಾರ್

ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ ಎಂದಿದ್ದಾರೆ.
Drought Relief Fund Discrepancy: Farmers Outraged As Reduced Amount Credited to Bank Accounts in Karnataka
ಬರ ಪರಿಶೀಲನೆ ನಡೆಸಿದ ಡಿಕೆ ಶಿವಕುಮಾರ್ (ಫೈಲ್ ಚಿತ್ರ)Online Desk
Updated on: 

ಬೆಂಗಳೂರು: ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಬಗ್ಗೆ ಗೊಂದಲ ಮೂಡಿದೆ. ಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪರಿಹಾರವನ್ನು ಪಾವತಿ ಮಾಡಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ ಎಂದಿದ್ದಾರೆ.

SDRF/NDRF ನಿಯಮಗಳಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ ಪರಿಹಾರ ನಿಗದಿಯಾಗಿದೆ. ಆದರೆ, ರಾಜ್ಯ ಸರ್ಕಾರ ಈ ಮೂರೂ ವರ್ಗದ ಬೆಳೆಗಳಿಗೂ ಕನಿಷ್ಠ ₹5,000 ಬರ ಪರಿಹಾರ ನೀಡಲಿದೆ. ಈ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪಡೆದ ರೈತರಿಗೆ ಬಾಕಿ ಹಣ ಮುಂದಿನ ಕಂತಿನಲ್ಲಿ ಪಾವತಿಯಾಗಲಿದೆ. ಅರ್ಹ ರೈತರು ಬೆಳೆ ನಷ್ಟದ ಆಧಾರದ ಮೇಲೆ ₹60,000ವರೆಗೆ ಇನ್‌ಪುಟ್ ಸಬ್ಸಿಡಿ ನೆರವನ್ನು ಪಡೆಯಬಹುದು. ರೈತರಿಗೆ ಪೂರ್ಣ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದ್ದು, ತಪ್ಪು ಮಾಹಿತಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X