ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ ಡಿ ಕೆ ಶಿವಕುಮಾರ್; Video

ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.
CM D K Shivakumar in Mysuru
ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್
Updated on: 

ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿಯ ಪ್ರತಿಭಟನೆಯನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೊದಲು ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದಿಂದ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಎದ್ದಿರುವ ಆತಂಕಗಳಿಗೆ ಬಿಜೆಪಿ ಉತ್ತರ ನೀಡಲಿ ಎಂದು ಬುಧವಾರ ಆಗ್ರಹಿಸಿದ್ದಾರೆ.

ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.

CM D K Shivakumar in Mysuru
ಆತಂಕ ಬೇಡ, ಅರ್ಹ ಪ್ರತಿಯೊಬ್ಬ ರೈತನಿಗೂ 5,000 ರೂ. ಬರ ಪರಿಹಾರ: ಡಿ ಕೆ ಶಿವಕುಮಾರ್; Video

ಇಂದು ಮೈಸೂರಿನ ಮಂಡಹಳ್ಳಿ ವಿಮಾನ ನಿಲ್ದಾಣ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಥೆನಾಲ್ ಮಿಶ್ರಣವನ್ನು ಶೇ.20ಕ್ಕೆ ಸೀಮಿತಗೊಳಿಸುವ ಬದಲು, ದೇಶಾದ್ಯಂತ ವಾಹನಗಳಿಗೆ ಬಳಸುವ ಇಂಧನದಲ್ಲಿ ಅದರ ಪ್ರಮಾಣವನ್ನು ಶೇ.20ರಿಂದ 30ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದೆ. ವಾಹನಗಳು ಮತ್ತು ಎಂಜಿನ್‌ಗಳು ಹಾನಿಗೊಳಗಾಗುತ್ತಿವೆ. ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿವೆ" ಎಂದು ಅವರು ಹೇಳಿದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿದ ಡಿ ಕೆ ಶಿವಕುಮಾರ್, 67 ಸ್ಥಳಗಳಿಂದ ಇಂಧನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ವಿಷಯವನ್ನು ಪರಿಶೀಲನೆಗಾಗಿ ಕೇಂದ್ರ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಈ ಸಮಸ್ಯೆ ದೇಶಾದ್ಯಂತದ ವಾಹನ ಮಾಲೀಕರ ಮೇಲೆ ಪರಿಣಾಮ ಬೀರುತ್ತಿದೆ. ವಾಹನಗಳಿಗೆ ಹಾನಿಯಾಗುತ್ತಿರುವುದರಿಂದ ಮತ್ತು ಅವುಗಳ ಬಳಕೆಯ ಅವಧಿ ಕಡಿಮೆಯಾಗುತ್ತಿರುವುದರಿಂದ ಜನರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X