ಮಂಗಳೂರು: ಮುಕ್ಕದ ಖಾಸಗಿ ವೈದ್ಯಕೀಯ ಕಾಲೇಜಿನ ಕ್ಯಾಂಟೀನ್, ಹಾಸ್ಟೆಲ್ ಅಡುಗೆಮನೆ ಮೇಲೆ ದಿಢೀರ್ ದಾಳಿ: ಅಧಿಕಾರಿಗಳ ತಪಾಸಣೆ; Video

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಈ ತಪಾಸಣೆ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ದಿಢೀರ್ ಪರಿಶೀಲನೆ ನಡೆಸಿದೆ.
Food safety officer raid
ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
Updated on: 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಹಾಸ್ಟೆಲ್‌ನ ಅಡುಗೆಮನೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿದ್ದಾರೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಈ ತಪಾಸಣೆ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ದಿಢೀರ್ ಪರಿಶೀಲನೆ ನಡೆಸಿದೆ.

ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಪೂರೈಸುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಪರಿಶೀಲಿಸುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ. ಊಟ ತಯಾರಿಸಲು ಬಳಸುವ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ, ಗುಣಮಟ್ಟ ಪರೀಕ್ಷೆಗಾಗಿ ಆಹಾರ ಪರೀಕ್ಷಾ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಅಡುಗೆಗೆ ಬಳಸುವ ನೀರಿನ ಮಾದರಿಗಳನ್ನೂ ಸಂಗ್ರಹಿಸಿ ಪ್ರಯೋಗಾಲಯದ ವಿಶ್ಲೇಷಣೆಗೆ ಕಳುಹಿಸಲಾಗಿದೆ.

Food safety officer raid
ಬೆಂಗಳೂರು: ಹಾಕಿ ಕ್ಲಬ್ ಕಿಚನ್ ಮೇಲೆ ಆಹಾರ ಸುರಕ್ಷತೆ ಇಲಾಖೆ ಸಿಬ್ಬಂದಿ ದಾಳಿ: ತೀವ್ರ ಸ್ವಚ್ಛತಾ ಲೋಪ ಪತ್ತೆ; Video

ರೋಗಿಗಳಿಗೆ ಪೂರೈಸುವ ಆಹಾರವನ್ನು ಶುಚಿಯಾದ ವಾತಾವರಣದಲ್ಲಿ ತಯಾರಿಸುವುದರ ಜತೆಗೆ ನಿಗದಿತ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳು ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.

ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ತೊಡಗಿರುವ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿರ್ದೇಶಿಸಲಾಗಿದೆ. ಆಹಾರ ತಯಾರಿಸುವ ಸಿಬ್ಬಂದಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಅವರ ವೈದ್ಯಕೀಯ ಕ್ಷಮತಾ ಪ್ರಮಾಣಪತ್ರಗಳನ್ನು ಸಲ್ಲಿಸುವಂತೆಯೂ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಇದಲ್ಲದೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳ ತಂಡ ಸಂಸ್ಥೆಗೆ ನಿರ್ದೇಶನ ನೀಡಿದೆ.

ಇದೇ ವೇಳೆ, ಹಬ್ಬಗಳಿಗಾಗಿ ತಯಾರಿಸುವ ಸಿಹಿತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆ ಪರಿಶೀಲಿಸಲು ಮುಲ್ಕಿಯ ಕಾರ್ನಾಡ್ ಪ್ರದೇಶದ ಬೇಕರಿಗಳಲ್ಲಿಯೂ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದೆ.

ಈ ವೇಳೆ ಸಿಹಿತಿಂಡಿಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಬಾರದು ಎಂದು ಬೇಕರಿ ಮಾಲೀಕರಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳದ ಬೇಕರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಕೃತಕ ಬಣ್ಣಗಳನ್ನು ಬಳಸಿ ತಯಾರಿಸಿರುವ ಶಂಕೆ ವ್ಯಕ್ತವಾದ ಸಿಹಿತಿಂಡಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು ಸೀಲ್ ಮಾಡಿದ್ದಾರೆ. ಬಳಿಕ ಅವುಗಳ ಮಾದರಿಗಳನ್ನು ಪರೀಕ್ಷೆಗಾಗಿ ಆಹಾರ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X