'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
Chief Minister DK Shivakumar
ಮುಖ್ಯಮಂತ್ರಿ ಡಿಕೆ.ಶಿವಕುಮಾರ್.
Updated on: 

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಿರುವ ಸರ್ಕಾರ, ಒಟ್ಟು 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ. ಇದರ ಬೆನ್ನಲ್ಲೇ ಮುಂಬರುವ ದಿನಗಳಲ್ಲಿ ಈ ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕಾತಿಯೂ ನಡೆಯುವ ಸಾಧ್ಯತೆಯಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಬುಧವಾರ ಅಧಿಕೃತ ಟಿಪ್ಪಣಿ ಹೊರಡಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ವಿವಿಧ ಸರ್ಕಾರಿ ಇಲಾಖೆಗಳು ನೇಮಕಾತಿ ಆದೇಶಗಳನ್ನು ಹೊರಡಿಸುವಂತೆ ನಿರ್ದೇಶನ ನೀಡಿದೆ.

ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (CESC), ಕರ್ನಾಟಕ ಗೃಹ ಮಂಡಳಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳು ಸೇರಿವೆ.

ಒಟ್ಟು 428 ಮಂದಿಯನ್ನು ವಿವಿಧ ಸಂಸ್ಥೆಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆಗಳು ಯಾವುದೇ ವಿಳಂಬವಿಲ್ಲದೆ ಅಗತ್ಯ ನೇಮಕಾತಿ ಆದೇಶಗಳನ್ನು ಹೊರಡಿಸುವಂತೆ ಸೂಚಿಸಲಾಗಿದೆ.

Chief Minister DK Shivakumar
ಸಿದ್ದರಾಮಯ್ಯ ಅಷ್ಟೊಂದು ವೀಕ್ ಅಲ್ಲ; ಕುಮಾರಸ್ವಾಮಿಗಿಂತ ಹೆಚ್ಚು ಧೈರ್ಯ ಇದೆ; MLC ಚುನಾವಣೆ ಬಳಿಕ ನಿಗಮ-ಮಂಡಳಿ ನೇಮಕಾತಿ: ಹರಿಪ್ರಸಾದ್

ಇದಕ್ಕೂ ಮುನ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ನಿಗಮ ಮತ್ತು ಮಂಡಳಿಗಳ ನೇಮಕಾತಿಯನ್ನು ಮೂರು ಹಂತಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

ಮುಂದಿನ ದಿನಗಳಲ್ಲಿ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್‌ನ ಹಿರಿಯ ಶಾಸಕರನ್ನೂ ನೇಮಕಾತಿಗೆ ಪರಿಗಣಿಸಲಾಗುವುದು ಎಂದು ಹೇಳಿದ್ದರು.

ಈ ಬೆಳವಣಿಗೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಶಾಸಕರು, ಮಾಜಿ ಶಾಸಕರು, ಪಕ್ಷದ ಕಾರ್ಯಕರ್ತರು ಹಾಗೂ ನಿಷ್ಠಾವಂತರಿಗೆ ನಿಗಮ ಮತ್ತು ಮಂಡಳಿಗಳಲ್ಲಿ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆ ಪಕ್ಷದ ನಾಯಕರಿಂದ ಮತ್ತು ಆಕಾಂಕ್ಷಿಗಳಿಂದ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ರಾಜಕೀಯ ನೇಮಕಾತಿ ಪೂರ್ಣಗೊಳಿಸುವಂತೆ ಒತ್ತಡವೂ ಇತ್ತು.

ಇದೀಗ ನಿರ್ದೇಶಕರು ಮತ್ತು ಸದಸ್ಯರ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿರುವುದರಿಂದ, ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಯನ್ನು ಸರ್ಕಾರ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ರಾಜಕೀಯ ಹುದ್ದೆಗಳ ಹಂಚಿಕೆಯ ಮುಂದಿನ ಹಂತವಾಗಿ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X