ಕರ್ನಾಟಕದಲ್ಲಿ ಹಲವು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಅವು ಯಾವುವು?: ಇಲ್ಲಿದೆ ಮಾಹಿತಿ...

ಬೆಂಗಳೂರು ಮೆಟ್ರೋದ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮಾರ್ಗವನ್ನು ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
Warm welcome in HAL airport
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ
Updated on: 

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಪಿಂಕ್ ಲೈನ್, ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡುವುದು ಹಾಗೂ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರ್ ಅಭಿವೃದ್ಧಿಪಡಿಸಲಾದ ನಾಲ್ಕು ರೈಲು ನಿಲ್ದಾಣಗಳನ್ನು ಉದ್ಘಾಟಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಪ್ರಧಾನಿ ಅವರು ಬೆಂಗಳೂರಿನ ತಾವರೆಕೆರೆಯಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಹಲವು ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು ಮೆಟ್ರೋದ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮಾರ್ಗವನ್ನು ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

Warm welcome in HAL airport
ನಮ್ಮ ಮೆಟ್ರೋ 100 ಕಿ.ಮೀ ಗೆ ವಿಸ್ತರಣೆ: ಪಿಂಕ್ ಲೈನ್ ಉದ್ಘಾಟನೆಯೊಂದಿಗೆ ಭಾರತದ ಎರಡನೇ ಅತಿ ದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರ !

ಇದಲ್ಲದೆ, ಸುಮಾರು 4,450 ಕೋಟಿ ರೂಪಾಯಿ ಹೂಡಿಕೆಯಲ್ಲಿ ಅಭಿವೃದ್ಧಿಪಡಿಸಲಾದ ಕೊಪ್ಪಳ-II ಮತ್ತು ಗದಗ-II ನವೀಕರಿಸಬಹುದಾದ ಇಂಧನ ವಲಯಗಳ ವಿದ್ಯುತ್ ಏಕೀಕರಣ ಪ್ರಸರಣ ಯೋಜನೆಯ (ಹಂತ-II)ನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಸುಮಾರು 1,370 ಕೋಟಿ ರೂಪಾಯಿ ಹೂಡಿಕೆಯಲ್ಲಿ ಅಭಿವೃದ್ಧಿಪಡಿಸಲಾದ ಬೀದರ್ ಸೌರಶಕ್ತಿ ವಲಯದ ವಿದ್ಯುತ್ ಪ್ರಸರಣ ಯೋಜನೆಯನ್ನೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ದಾವಣಗೆರೆ/ಚಿತ್ರದುರ್ಗ ಮತ್ತು ಬಳ್ಳಾರಿ ನವೀಕರಿಸಬಹುದಾದ ಇಂಧನ ವಲಯಗಳ ವಿದ್ಯುತ್ ಏಕೀಕರಣಕ್ಕಾಗಿ 3,450 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಪ್ರಸರಣ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಲ್ಲದೆ, ದಾವಣಗೆರೆ ಮತ್ತು ಬಳ್ಳಾರಿ ಪ್ರದೇಶಗಳಲ್ಲಿನ ಹೆಚ್ಚುವರಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಬಳಕೆಗೆ ಅನುಕೂಲವಾಗುವಂತೆ 1,100 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿದ್ಯುತ್ ಪ್ರಸರಣ ವ್ಯವಸ್ಥೆ ಬಲವರ್ಧನೆ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ.

Warm welcome in HAL airport
PM Modi visit to Bengaluru | ಕರ್ನಾಟಕದಲ್ಲಿ 15,600 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ

ಮಂಗಳೂರಿನಲ್ಲಿ ದೇಶದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾ ಘಟಕ ರಾಷ್ಟ್ರಕ್ಕೆ ಸಮರ್ಪಣೆ

850 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾ ಘಟಕವನ್ನು ಪ್ರಧಾನಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 80,000 ಮೆಟ್ರಿಕ್ ಟನ್ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಘಟಕವು ದೇಶದ ಎಲ್‌ಪಿಜಿ ಸಂಗ್ರಹಣಾ ಮೂಲಸೌಕರ್ಯವನ್ನು ಗಣನೀಯವಾಗಿ ಬಲಪಡಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಯೋಜನೆಯಡಿ ನವ ಮಂಗಳೂರು ಬಂದರಿನಿಂದ ಮುಖ್ಯ ಟರ್ಮಿನಲ್‌ವರೆಗೆ 9.4 ಕಿ.ಮೀ. ಉದ್ದದ ಎಲ್‌ಪಿಜಿ ಪೈಪ್‌ಲೈನ್ ಕೂಡ ನಿರ್ಮಿಸಲಾಗಿದೆ. ಇದರಿಂದ ಎಲ್‌ಪಿಜಿ ಸಾಗಣೆ ಮತ್ತು ಸಂಗ್ರಹಣೆ ಪ್ರಕ್ರಿಯೆ ಹೆಚ್ಚು ಸುಗಮವಾಗಲಿದೆ.

ಎಂಆರ್‌ಪಿಎಲ್‌ನ ದೇವನಗುಂದಿ ಮಾರ್ಕೆಟಿಂಗ್ ಟರ್ಮಿನಲ್ ರಾಷ್ಟ್ರಕ್ಕೆ ಸಮರ್ಪಣೆ

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಬೆಂಗಳೂರಿನ ದೇವನಗುಂದಿ ಮಾರ್ಕೆಟಿಂಗ್ ಟರ್ಮಿನಲ್ ನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

330 ಕೋಟಿ ರೂಪಾಯಿ ಹೂಡಿಕೆಯಲ್ಲಿ ನಿರ್ಮಿಸಲಾಗಿರುವ ಈ ಅತ್ಯಾಧುನಿಕ ಘಟಕವು ಕರ್ನಾಟಕದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹಣೆ ಮತ್ತು ವಿತರಣಾ ಮೂಲಸೌಕರ್ಯವನ್ನು ಬಲಪಡಿಸಲಿದೆ.

ಹಾರಲಕುಂಟೆಯಲ್ಲಿ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಶಂಕುಸ್ಥಾಪನೆ

ಬೆಂಗಳೂರಿನ ಹಾರಲಕುಂಟೆಯಲ್ಲಿ ಗೇಲ್ (GAIL) ಸಂಸ್ಥೆಯ ಸಂಕುಚಿತ ಜೈವಿಕ ಅನಿಲ (ಸಿಬಿಜಿ) ಘಟಕಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಘಟಕದಲ್ಲಿ ಪ್ರತಿದಿನ ಸುಮಾರು 300 ಟನ್ ನಗರ ಘನತ್ಯಾಜ್ಯವನ್ನು ಸಂಸ್ಕರಿಸಿ, 12.6 ಟನ್ ಶುದ್ಧ ಸಂಕುಚಿತ ಜೈವಿಕ ಅನಿಲವನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X