ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಸ್ಥಳದಲ್ಲಿದ್ದವರ ಬಳಿ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದರೂ ಪ್ರಯೋಜನವಾಗಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
Charan gowda
ಚರಣ್ ಗೌಡ
Updated on: 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳ ಗ್ಯಾಂಗ್ ಉದ್ಯಮಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾರೆ.

ಮೃತರನ್ನು 39 ವರ್ಷದ ಚರಣ್ ಗೌಡ ಎಂದು ಗುರುತಿಸಲಾಗಿದೆ. ಇವರು ಧಣಿ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕರಾಗಿದ್ದು, ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಸಮೀಪ, ಬ್ಯಾಂಕ್ ಮುಂಭಾಗದಲ್ಲಿ ಈ ಭೀಕರ ಹತ್ಯೆ ನಡೆದಿದೆ.

ಚರಣ್ ಗೌಡ ಅವರು ಯಲಹಂಕ ನ್ಯೂ ಟೌನ್‌ನಲ್ಲಿರುವ ತಮ್ಮ ಕಚೇರಿಗೆ ಪತ್ನಿಯೊಂದಿಗೆ ಆಗಮಿಸುತ್ತಿದ್ದರು. ಕೋಗಿಲು ನಿವಾಸದಿಂದ ಕಚೇರಿಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಬ್ಯಾಂಕ್‌ನ ಮೇಲ್ಮಹಡಿಯಲ್ಲಿ ಚರಣ್ ಗೌಡ ಅವರ ಕಚೇರಿ ಇತ್ತು ಎನ್ನಲಾಗಿದ್ದು, ಕಚೇರಿಗೆ ತೆರಳುವ ಮಾರ್ಗದಲ್ಲೇ ಹಂತಕರು ದಾಳಿ ನಡೆಸಿದ್ದಾರೆ.

Charan gowda
'ರಸ್ತೆ ಮೇಲೆ ಪಟಾಕಿ ಹೊಡಿಬೇಡ' ಎಂದಿದ್ದಕ್ಕೇ ಪೊಲೀಸ್ ಅಧಿಕಾರಿಯನ್ನೇ ಹೊಡೆದು ಕೊಂದ ದುಷ್ಕರ್ಮಿಗಳು, ದೀಪಾವಳಿ ದಿನವೇ 3 ಕೊಲೆ!

ಐದರಿಂದ ಆರು ಮಂದಿ ಯುವಕರಿದ್ದ ಗ್ಯಾಂಗ್ ಮಾರಕಾಸ್ತ್ರಗಳನ್ನು ಹಿಡಿದು ಏಕಾಏಕಿ ಚರಣ್ ಮೇಲೆ ಹಲ್ಲೆ ಮಾಡಿದ್ದಾರೆ. ಸುಮಾರು 22 ವರ್ಷದ ಯುವಕರ ತಂಡ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಚರಣ್ ಅವರ ತಲೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಚರಣ್ ಗೌಡ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದುದನ್ನು ಕಂಡ ಪತ್ನಿ ಆಘಾತಕ್ಕೊಳಗಾಗಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಚರಣ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.. ಬಳಿಕ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಚರಣ್ ಗೌಡ ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವರೊಂದಿಗೆ ವಿವಾದ ಉಂಟಾಗಿತ್ತು. ಇದೇ ಹಳೆಯ ದ್ವೇಷದ ಹಿನ್ನೆಲೆ ಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

+

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X