ವಿಧಾನಸೌಧವನ್ನೇ ಮಾರಿಬಿಡಿ ಎಂದ ಸಚಿವ ಭೈರತಿ ಸುರೇಶ್: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂ

ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿಳಂಬ ಧೋರಣೆಯನ್ನು ಖಂಡಿಸಿ, "ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ" ಎಂದು ಸಚಿವ ಭೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Byrathi Suresh
ಭೈರತಿ ಸುರೇಶ್
Updated on: 

ಚಿಕ್ಕಬಳ್ಳಾಪುರ: ಇತ್ತೀಚೆಗೆ ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳುತ್ತಿರುವ ಅಥವಾ ತಮ್ಮ ಹೆಸರಿನಲ್ಲಿ ಬೂಗಸ್ ದಾಖಲೆಗಳನ್ನು ಸೃಷ್ಟಿಸಿ ನೋಂದಾಯಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಈ ಆಸ್ತಿಗಳನ್ನ ರಕ್ಷಿಣೆ ಮಾಡಬೇಕಾದ ಅಧಿಕಾರಿಗಳ ಧೋರಣೆ ತೋರಿಸುತ್ತಿರುವ ಅಧಿಕಾರಿಗಳ ವಿರುದ್ದ ಕಿಡಿಕಾರಿರುವ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಅವರು, "ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ" ಎಂದು ಸಚಿವ ಭೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಹಗರಣ?

ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯ ಅಣಕನೂರು ಗ್ರಾಮದ ಸರ್ವೆ ನಂಬರ್‌ಗಳಲ್ಲಿರುವ 24 ಎಕರೆ ಸರ್ಕಾರಿ ಕೆರೆ/ಖರಾಬು ಭೂಮಿಯನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಇ-ಖಾತೆ ಮಾಡಿ ಪರಭಾರೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಅಕ್ರಮ ಬೆಳಕಿಗೆ ಬಂದ ನಂತರ, ನಕಲಿ ದಾಖಲೆಗಳ ಸೃಷ್ಟಿ ಮತ್ತು ನಗರಸಭೆ ಅಧಿಕಾರಿಗಳ ಶಾಮೀಲಾತಿ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿತ್ತು. ಸೆಪ್ಟೆಂಬರ್ 2026ರಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಧ್ಯಂತರ ವರದಿಯನ್ನೂ ಸಲ್ಲಿಸಲಾಗಿತ್ತು. ಇನ್ನು, ಪ್ರಕರಣ ಬೆಳಕಿಗೆ ಬಂದು ತಿಂಗಳುಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಮತ್ತು ಸರ್ಕಾರಿ ಜಾಗವನ್ನು ಮರಳಿ ವಶಕ್ಕೆ ಪಡೆಯುವಲ್ಲಿ ವಿಳಂಬ ಧೋರಣೆ ಅನುಸರಿಸಿರುವುದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವರಾದ ಭೈರತಿ ಸುರೇಶ್ ಅವರು ಕೆಡಿಪಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭು ಹಾಗೂ ನಗರಸಭೆ ಆಯುಕ್ತ ಮನ್ಸೂರ್ ಅಲಿ ಅವರ ಕಾರ್ಯವೈಖರಿಯನ್ನು ನೇರವಾಗಿ ಪ್ರಶ್ನಿಸಿದರು. ಈ ವೇಳೆ, "ಸರ್ಕಾರಿ ಕೆರೆ ಜಾಗವನ್ನೇ ಮಾರಾಟ ಮಾಡಲು ಬಿಟ್ಟರೆ ಹೇಗೆ? ಹೀಗೆಯೇ ಮುಂದುವರಿದರೆ ವಿಧಾನಸೌಧವನ್ನೇ ಮಾರಿಬಿಡಿ" ಎಂದು ತೀವ್ರ ಅಸಮಾಧಾನ ಹೊರಹಾಕಿದರು.

Byrathi Suresh
ಟಿಪ್ಪು ಸುಲ್ತಾನ್ ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿದ್ದರು; RSS ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಿರಲಿಲ್ಲ: ಪ್ರಿಯಾಂಕ್ ಖರ್ಗೆ; Video

1,575 ಎಕರೆ ಒತ್ತುವರಿ ಪತ್ತೆ

ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ 443 ಕೆರೆಗಳ ಒಟ್ಟು 1,575 ಎಕರೆ ಭೂಮಿ ಒತ್ತುವರಿಯಾಗಿರುವುದು ಬೆಳಕಿಗೆ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಸಹ ಜಿಲ್ಲಾ ಪಂಚಾಯಿತಿ ಸಿಇಒ ಡಾ. ವೈ. ನವೀನ್ ಭಟ್ ಅವರಿಗೆ ಸಭೆ ನಡೆಸಿ, ವಸತಿ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆರೆ ಒತ್ತುವರಿಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X