ಹಾಸನ: ಎರಡು ದಿನಗಳಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಬಲಿ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಇಂದು ಬೆಳಿಗ್ಗೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ 64 ವರ್ಷದ ವೃದ್ಧನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಕಾಡಾನೆ ದಾಳಿಯ ಸಾವು ಇದಾಗಿದೆ.
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Updated on: 

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಇಂದು ಬೆಳಿಗ್ಗೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ 64 ವರ್ಷದ ವೃದ್ಧನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಕಾಡಾನೆ ದಾಳಿಯ ಸಾವು ಇದಾಗಿದೆ.

ಮೃತನನ್ನು ಹಫೀಜ್ ಉರ್ ರೆಹಮಾನ್ ಎಂದು ಗುರುತಿಸಲಾಗಿದೆ. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಕೇವಲ ಎರಡು ದಿನಗಳ ಹಿಂದೆ, ಬೇಲೂನ ಪಾಳುಬಿದ್ದ ಕೃಷಿ ಜಮೀನೊಂದರಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ 65 ವರ್ಷದ ಜಯಮ್ಮ ಎಂಬುವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಈ ಘಟನೆಯ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ನಂತರ ಕಾಡಾನೆಗಳನ್ನು ಓಡಿಸಲು ಕ್ರಮಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಭರವಸೆ ನೀಡಿದ ನಂತರವಷ್ಟೇ ಪ್ರತಿಭಟನೆಯನ್ನು ಹಿಂಪಡೆಯಲಾಗಿತ್ತು. ಇದಾದ ಬೆನ್ನಲ್ಲೇ ವಾರ ಎರಡನೇ ಮಾರಣಾಂತಿಕ ಆನೆ ದಾಳಿ ಸಂಭವಿಸಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ನಾಗೇನಹಳ್ಳಿಯ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ರೆಹಮಾನ್ ಅವರು ಕಾಡಾನೆಯೊಂದು ತುಳಿದು ಕೊಂದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಅಂತರದಲ್ಲಿ ಸಂಭವಿಸಿದ ಈ ಎರಡನೇ ಸಾವಿನಿಂದಾಗಿ ಸ್ಥಳೀಯರು ಮತ್ತೆ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷವನ್ನು ತಡೆಯುವಲ್ಲಿ ಅರಣ್ಯ ಇಲಾಖೆಯು "ನಿರ್ಲಕ್ಷ್ಯ ವಹಿಸಿದೆ ಮತ್ತು ವಿಫಲವಾಗಿದೆ" ಎಂದು ಆರೋಪಿಸಿದ್ದಾರೆ.

ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ರಾಮನಗರ: ಟ್ರಕ್ಕಿಂಗ್‌ಗೆ ಬಂದು ಬೆಟ್ಟದಲ್ಲಿ ದಾರಿ ತಪ್ಪಿದ ಒಡಿಶಾ ಮೂಲದ ಯುವಕನ ರಕ್ಷಣೆ

ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪ್ರಯತ್ನಿಸಿದರು. ಇನ್ನು ಶನಿವಾರ ಬೆಳಿಗ್ಗೆಯಿಂದಲೇ ಆ ಪ್ರದೇಶದಲ್ಲಿ ಆನೆಗಳ ಓಡಾಟದ ಬಗ್ಗೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು ಹಾಸನಕ್ಕೆ ಪ್ರಯಾಣಿಸುತ್ತಿದ್ದು, ಅಲ್ಲಿ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X