KPSC ನೇಮಕಾತಿ ಹಗರಣ: ಸಾಹುಕಾರ್ ₹4.17 ಕೋಟಿ, ಇತರರು ತಲಾ ₹1.5 ಕೋಟಿ ಅಕ್ರಮ ಗಳಿಕೆ; ED ತನಿಖೆಯಲ್ಲಿ ಸ್ಫೋಟಕ ಮಾಹಿತಿ..!

ಇ.ಡಿ.ಯ ಅಧಿಕೃತ ಪ್ರಕಟಣೆಯ ಪ್ರಕಾರ, ಅಕ್ರಮ ಹಣದ ವಹಿವಾಟಿನಲ್ಲಿ ಸಾಹುಕಾರ್ ಅವರು ಸುಮಾರು 4.17 ಕೋಟಿ ರೂ. ಮೌಲ್ಯದ ಅಪರಾಧದ ಆದಾಯವನ್ನು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
KPSC recruitment scam: Ex-chairman Shivashankarappa Sahukar, member BV Geetha sent to ED custody till October 19
ಶಿವಶಂಕರಪ್ಪ ಸಾಹುಕಾರ್ - ಗೀತಾ
Updated on: 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆಯೋಗದ ಅಧ್ಯಕ್ಷ ಎಸ್. ಶಿವಶಂಕರಪ್ಪ ಸಾಹುಕಾರ್ ಮತ್ತು ಇತರ ಮೂವರ ವಿರುದ್ಧ ಬೆಂಗಳೂರಿನ ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಸಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಗಳಿಸಿರುವ ಆರೋಪವನ್ನು ಇ.ಡಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಆಯೋಗದ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ, ಐಎಎಸ್ ಅಧಿಕಾರಿ ಹಾಗೂ ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ್ ಕನ್ನಾಳೆ ವಿರುದ್ಧ ಈ ದೂರು ದಾಖಲಿಸಲಾಗಿದೆ.

ಇ.ಡಿ.ಯ ಅಧಿಕೃತ ಪ್ರಕಟಣೆಯ ಪ್ರಕಾರ, ಅಕ್ರಮ ಹಣದ ವಹಿವಾಟಿನಲ್ಲಿ ಸಾಹುಕಾರ್ ಅವರು ಸುಮಾರು 4.17 ಕೋಟಿ ರೂ. ಮೌಲ್ಯದ ಅಪರಾಧದ ಆದಾಯವನ್ನು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಗೀತಾ ಶಿವಮೂರ್ತಿ ಅವರು 1.48 ಕೋಟಿ ರೂ. ಹಾಗೂ ಗಂಗ್ವಾರ್ ಮತ್ತು ಬಸವರಾಜ್ ಕನ್ನಾಳೆ ತಲಾ 1.52 ಕೋಟಿ ರೂ. ಮೌಲ್ಯದ ಅಕ್ರಮ ಹಣದೊಂದಿಗೆ ಸಂಬಂಧ ಹೊಂದಿರುವುದು ಬೆಳಕಿಗೆ ಬಂದಿದೆ ಎಂದು ಸಂಸ್ಥೆ ತಿಳಿಸಿದೆ.

KPSC recruitment scam: Ex-chairman Shivashankarappa Sahukar, member BV Geetha sent to ED custody till October 19
KPSC ನೇಮಕಾತಿ ಹಗರಣ: ಆರೋಪಿಗಳಿಗೆ ED ಶಾಕ್; 1.22 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ!

ಅಪರಾಧದಿಂದ ಗಳಿಸಿದ ಹಣವನ್ನು ಸ್ವಾಧೀನಪಡಿಸಿಕೊಳ್ಳುವುದು, ಹೊಂದಿರುವುದು, ಬಳಕೆ ಮಾಡುವುದು ಮತ್ತು ಮರೆಮಾಚುವ ಮೂಲಕ ಅದನ್ನು ಕಾನೂನುಬದ್ಧವಾಗಿ ಸಂಪಾದಿಸಿದ ಆಸ್ತಿಯೆಂದು ಬಿಂಬಿಸುವ ಪ್ರಕ್ರಿಯೆಯಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಇ.ಡಿ. ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

ಕರ್ನಾಟಕದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 9ರಂದು ನಡೆದ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಕೆಪಿಎಸ್‌ಸಿ ನೇಮಕಾತಿಗಳಲ್ಲಿ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಭಾರತೀಯ ನ್ಯಾಯ ಸಂಹಿತೆ-2023ರ ಸೆಕ್ಷನ್ 318(3), 318(4), 336(2), 336(3) ಮತ್ತು 340(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಎಫ್‌ಐಆರ್‌ಗಳ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ಕೈಗೊಂಡಿತ್ತು.

ತನಿಖೆಯ ಬಳಿಕ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗಿದೆ ಎಂದು ಇ.ಡಿ. ಸೋಮವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X