ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಬೊಲೆರೊಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ದುರ್ಮರಣ!

ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
4 Killed in accident on NH 44, near Nandi Hills police station in Chikkaballapur
ಬೊಲೆರೊಗೆ ಕಾರು ಡಿಕ್ಕಿ
Updated on: 

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಳಿ ಬುಧವಾರ ಕಾರು ಹಾಗೂ ಬೊಲೆರೊ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

4 Killed in accident on NH 44, near Nandi Hills police station in Chikkaballapur
ಮಂಗಳೂರು: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ; ನಳಿನ್ ಕುಮಾರ್ ಕಟೀಲ್ ಸೇರಿ 236 ಮಂದಿ ಸುರಕ್ಷಿತ! Video

ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಮೃತರಲ್ಲಿ ಜಗದೀಶ್ ಹಾಗೂ ವೈಷ್ಣವ್ ಎಂಬುವವರ ಗುರುತು ಪತ್ತೆಯಾಗಿದ್ದು, ಇವರು ಬೆಂಗಳೂರಿನ ಯಲಹಂಕ ಮೂಲದವರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X