KPSC ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಬಂಧಿಸಿದ SIT

ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರೊಂದಿಗೆ ಗೀತಾ ಕೂಡ ನೇಮಕಾತಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ ಎಂದು ಮೂಲಗಳು ತಿಳಿಸಿವೆ.
File photo
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಅವರನ್ನು ಬಂಧನಕ್ಕೊಳಪಡಿಸಿದೆ.

ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ದಾಖಲಾದ ಪ್ರಕರಣದಲ್ಲಿ ಗೀತಾ ಅವರು ಜಾಮೀನಿನ ಮೇಲೆ ಹೊರಗಿದ್ದರು. ಮಂಗಳವಾರ ವಿಚಾರಣೆಗಾಗಿ ಎಸ್‌ಐಟಿ ಮುಂದೆ ಹಾಜರಾಗಿದ್ದರು. ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.

ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರೊಂದಿಗೆ ಗೀತಾ ಕೂಡ ನೇಮಕಾತಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ ಎಂದು ಮೂಲಗಳು ತಿಳಿಸಿವೆ.

ತನಿಖೆಗೆ ಸಹಕರಿಸದ ಆರೋಪದ ಹಿನ್ನೆಲೆಯಲ್ಲಿ ಎಸ್‌ಐಟಿ ಅವರನ್ನು ಬಂಧಿಸಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಗೀತಾ ಅವರನ್ನು ಐದು ದಿನಗಳ ಪೊಲೀಸ್ ವಶಕ್ಕೆ ಪಡೆದುಕೊಳ್ಳಲು ತನಿಖಾ ತಂಡ ಅನುಮತಿ ಪಡೆದಿದೆ.

File photo
KPSC ನೇಮಕಾತಿ ಹಗರಣ: ಸಾಹುಕಾರ್ ₹4.17 ಕೋಟಿ, ಇತರರು ತಲಾ ₹1.5 ಕೋಟಿ ಅಕ್ರಮ ಗಳಿಕೆ; ED ತನಿಖೆಯಲ್ಲಿ ಮಾಹಿತಿ..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X