ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಪೊಲೀಸರ ಅಲರ್ಟ್; ಆತ್ಮಹತ್ಯೆ ಯತ್ನ ತಡೆಯಲು Anti-suicide squad ನಿಯೋಜನೆ..!

ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ಹಲವು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.
File photo
ಸಂಗ್ರಹ ಚಿತ್ರ
Updated on: 

ಬೆಳಗಾವಿ: ಡಿಸೆಂಬರ್ 2ರಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರು ಆತ್ಮಹತ್ಯೆಗೆ ಯತ್ನಿಸುವುದನ್ನು ತಡೆಯಲು ಬೆಳಗಾವಿ ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ತಂಡವೊಂದನ್ನು ರಚಿಸಿದ್ದಾರೆ.

ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ಹಲವು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆಗಳ ವೇಳೆ ಆತ್ಮಹತ್ಯೆ ಯತ್ನಗಳನ್ನು ತಡೆಯಲು ಮತ್ತು ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಪೊಲೀಸರು ವಿಶೇಷ ತಂಡವನ್ನು ನಿಯೋಜಿಸಿದ್ದಾರೆ.

ಕಬ್ಬಿನ ಬೆಲೆ ನಿಗದಿ ಹಾಗೂ ಬೆಳೆ ನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬೆಳವಣಿಗೆಗಳ ನಡುವೆಯೇ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ತಂಡ ರಚಿಸಿದ್ದಾರೆ.

File photo
'ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಿ ಸೌಲಭ್ಯ ಬೇಡ': ಸ್ವಂತ ಖರ್ಚಿನಲ್ಲೇ ಭಾಗವಹಿಸುವುದಾಗಿ ಶಾಸಕ ಶರಣಗೌಡ ಕಂದಕೂರು ಪತ್ರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X